ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ಇಡೀ ಜಗತ್ತಿಗೆ ಬೆಳಕು ನೀಡಿದ ದಾರ್ಶನಿಕ. ಅವರ ವಿಚಾರಧಾರೆಗಳ ಬಗೆಗೆ ನಮ್ಮ ಯುವಕರ ನಡುವೆ ವಿಚಾರ ಮಂಥನಗಳು ನಡೆಯಬೇಕು ಎಂದು ಸರಸ್ವತಿ ವಿದ್ಯಾಲಯದ ಪ್ರಭಾರ ಪ್ರಾಂಶುಪಾಲೆ ಕವಿತಾ ಎಮ್ .ಸಿ ಹೇಳಿದರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ವಿವೇಕಾನಂದರ ತತ್ವಗಳ ಕುರಿತಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ವಿದ್ಯಾರ್ಥಿ ವಿವೇಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಇಂದು ಸಮಾಜದ ಯುವಶಕ್ತಿ ಒಂದು ನಿರ್ದಿಷ್ಠ ಗುರಿಯಿಲ್ಲದೆ ಮುಂದೆ ಸಾಗುತ್ತಿರುವುದು ತಮ್ಮ ಜವಾಬ್ದಾರಿಗಳನ್ನು ಮರೆತಿರುವುದು ವಿಷಾದಕರ.ವಿವೇಕಾನಂದರ ಬದುಕು ಮತ್ತು ಸಾಧನೆಗಳು ಅವರಿಗೆ ಉತ್ತಮ ಬದುಕು ಕಟ್ಟಿಕೊಳ್ಳುವಲ್ಲಿ ಪ್ರೇರೆಪಣೆ ನೀಡುತ್ತವೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳಾದ ವಿನ್‌ಸ್ಟ್‌ನ್ ಪಿಂಟೋ,ತಿರುಮಲೇಶ ಭಟ್, ಹೃತಿಕ್ ಖಾನೋಜಿ,ನಾಗರಾಜ ನಾಯಕ್, ಸುನೈನಾ ಬಾನು, ಆಶ್ಮಿತಾ, ಅನುಷಾ ಪೂಜಾರಿ,ನಿಶ್ಮಿತಾ ಮತ್ತು ರಕ್ಷಿತಾ ಕೊತ್ವಾಲ್ ವಿವೇಕಾನಂದರ ಬದುಕು ಮತ್ತು ಅವರು ಪ್ರತಿಪಾದಿಸಿದ ವಿಚಾರಗಳ ಬಗೆಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿ ಆಶಾ ಪ್ರಾರ್ಥಿಸಿದರು. ಯಶಸ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ‍್ಯಕ್ರಮ ಸಂಯೋಜಿಸಿದ್ದರು.ಉಪನ್ಯಾಸಕರಾದ ಸುಗುಣ ಆರ್, ಅರುಣ್‌ಕುಮಾರ್ ಉಪಸ್ಥಿತರಿದ್ದರು. ಮನಿಷಾ ಪೂಜಾರಿ ಕಾರ‍್ಯಕ್ರಮ ನಿರ್ವಹಿಸಿದರು.ನಾಗೇಂದ್ರ ಮೊಗವೀರ ವಂದಿಸಿದರು.
ವರದಿ : ನರೇಂದ್ರ ಎಸ್ ಗಂಗೊಳ್ಳಿ.