Site icon Kundapra.com ಕುಂದಾಪ್ರ ಡಾಟ್ ಕಾಂ

ಚಿತ್ತೂರಿನಲ್ಲಿ ಗ್ರಾಮೀಣ ಕ್ರೀಡಾ ಕೂಟ

ಕೊಲ್ಲೂರು: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಉಡುಪಿ ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಪ್ರೇರಣಾ ಯುವ ವೇದಿಕೆ ನೈಕಂಳ್ಳಿ ಚಿತ್ತೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಯುವ ಸಪ್ತಾಹದ ಅಂಗವಾಗಿ ಗ್ರಾಮೀಣ ಕ್ರೀಡಾ ಕೂಟ ಇತ್ತೀಚಿಗೆ ಚಿತ್ತೂರಿನಲ್ಲಿ ನಡೆಯಿತು.

ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಪ್ರೇರಣಾ ಯುವ ವೇದಿಕೆಯ ಅಧ್ಯಕ್ಷ ಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯ ಉದಯ ಪಿ.ಪೂಜಾರಿ, ಅರ್ಚಕ ಗಣೇಶ ಉಡುಪ, ಎಸ್‌ಡಿಎಂಸಿ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ನರಸಿಂಹ ಗಾಣಿಗ ಕಟ್‌ಬೇಲ್ತೂರು, ಮಹಾವಿಷ್ಣು ಯುವಕ ಮಂಡಲದ ಅಧ್ಯಕ್ಷ ರವೀಶ ಡಿ.ಎಂ. ಮೊದಲಾದವರು ಉಪಸ್ಥಿತರಿದ್ದರು. ನಾಗರಾಜ ಶೆಟ್ಟಿ ಸ್ವಾಗತಿಸಿದರು. ಉದಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ದಿನೇಶ ಶೆಟ್ಟಿ ವಂದಿಸಿದರು.

Exit mobile version