Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ ವಾಲಿಬಾಲ್ ಪಂದ್ಯಾಟ: ಆಳ್ವಾಸ್ ಮೂಡುಬಿದ್ರಿ, ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜ್ ಪ್ರಥಮ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ. ಸ್ನಾತಕೋತ್ತರ ಪದವಿ ವಿಭಾಗದ ನೇತೃತ್ವದಲ್ಲಿ ಮೂಡಲಕಟ್ಟೆ ತಾಂತ್ರಿಕ ಕಾಲೇಜ್ ಮೈದಾನದಲ್ಲಿ ನಡೆದ ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ಪದವಿ ಕಾಲೇಜ್ ಮಟ್ಟದ ಪುರುಷ ಹಾಗೂ ಮಹಿಳಾ ವಿಭಾಗದ ವಾಲಿಬಾಲ್ ಪಂದ್ಯಾಟದ ನಡೆದಲ್ಲಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಆಳ್ವಾಸ್ ಮೂಡುಬಿದ್ರಿ ಮತ್ತು ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜ್ ಪಡೆದುಕೊಂಡಿತು.

ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನ ಬಸ್ರೂರು ಶ್ರೀ ಶಾರದಾ ಕಾಲೇಜ್ ಮತ್ತು ಮಹಿಳಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಶಿರ್ವ ಎಂ.ಎಸ್.ಆರ್.ಎಸ್. ಶಿರ್ವ ಕಾಲೇಜ್ ತನ್ನದಾಗಿಸಿಕೊಂಡಿತು. ಸಮಾರೋಪದಲ್ಲಿ ಪ್ರೊ| ರಾಧಾಕೃಷ್ಣ ಶೆಟ್ಟಿ, ಕಾಲೇಜ್ ಅಧ್ಯಕ್ಷ ಸಿದ್ಧಾರ್ಥ ಶೆಟ್ಟಿ ಹಾಗೂ ಪ್ರಾಂಶುಪಾಲೆ ಡಾ|.ಶುಭಾ ಪಿ. ಭಟ್ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಶ್ರೀ ರಮೇಶ್ ಎಂ. ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ೨೬ ಪದವಿ ಕಾಲೇಜ್ ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಎಂ.ಬಿ.ಎ. ಮುಖ್ಯಸ್ಥೆ ಪ್ರೊ. ಸೀಮಾ ಸಕ್ಸೇನಾ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

news 20KND_2 MIT

Exit mobile version