Kundapra.com ಕುಂದಾಪ್ರ ಡಾಟ್ ಕಾಂ

ಮುಳ್ಳಿಕಟ್ಟೆ: ಓಮ್ಮಿಗೆ ಬಸ್ ಡಿಕ್ಕಿ: ಯುವಕನ ಸಾವು, ನಾಲ್ವರು ಗಂಭೀರ

ಕುಂದಾಪುರ: ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಮುಳ್ಳಿಕಟ್ಟೆ ಜಂಕ್ಷನ್ ಬಳಿ ಖಾಸಗಿ ಬಸ್ ಹಾಗೂ ಓಮ್ನಿ ನಡುವೆ ನಡೆದ ಅಪಫಾತದಲ್ಲಿ ಓಮ್ನಿ ಪ್ರಯಾಣಿಕರೋರ್ವರು ಮೃತಪಟ್ಟು, ಉಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಸಂಜೆ ವರದಿಯಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

ಘಟನೆ ವರದಿ:
ತ್ರಾಸಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಕುಂದಾಪುರ ಕಡೆಯಿಂದ ಮರವಂತೆ ಕಡೆಗೆ ಸಾಗುತ್ತಿದ್ದ ಓಮ್ನಿ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓಮ್ನಿಯಲ್ಲಿದ್ದ ಮರವಂತೆ ನಿವಾಸಿ ಮಮಿತ್ ಪೂಜಾರಿ (23) ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಓಮ್ನಿಯಲ್ಲಿದ್ದ ಮರವಂತೆ ನಿವಾಸಿಗಳಾದ ಗಣೇಶ ಮೊಗವೀರ, ಕೇಶವ ಮೊಗವೀರ, ದಿನೇಶ ಪೂಜಾರಿ ಹಾಗೂ ಮಹೇಶ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಒಮ್ನಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಗಂಗೊಳ್ಳಿ ಪಿಎಸ್‌ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಕ್ರಮಕೈಗೊಂಡರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mullikatte Accident bus and omni one spot (1)

Exit mobile version