Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಸಮಾರೋಪ

ಗಂಗೊಳ್ಳಿ: ಜೀವನದಲ್ಲಿ ಎನ್ನೆಸ್ಸೆಸ್‌ನಲ್ಲಿ ಕಲಿತ ಉತ್ತಮ ವಿಚಾರಗಳನ್ನು ಆಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಹಾಗಾದಾಗ ಒಂದು ಸಂಘಟನೆಯಲ್ಲಿ ನಾವು ಭಾಗವಹಿಸಿದ್ದಕ್ಕೂ ಸಾರ್ಥಕವಾಗುತ್ತದೆ. ಉಳಿದವರಿಗೆ ಅದು ಸ್ಫೂರ್ತಿಯಾಗುತ್ತದೆ ಎಂದು ವಂಡ್ಸೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರಕಾಶ್ ನಾಯಕ್ ಹೇಳಿದರು

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಸುಪಾಲ ಆರ್ ಎನ್ ರೇವಣ್‌ಕರ್ ಮಾತನಾಡಿ ಜೀವನದಲ್ಲಿ ಒಳ್ಳೆಯತನ ಮುಖ್ಯ. ನಮ್ಮಿಂದ ಬೇರೆಯವರಿಗೆ ಉಪಕಾರ ಮಾಡಲಾಗದಿದ್ದರೆ ಅಪಕಾರವನ್ನಂತೂ ಮಾಡಬಾರದು ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ನಾರಾಯಣ್ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಅನುಷಾ ಸ್ವಾಗತಿಸಿದರು.ಸ್ವಾತಿ ಅತಿಥಿಗಳನ್ನು ಪರಿಚಯಿಸಿದರು. ಸಂಪ್ರೀತಾ, ಸುಪ್ರೀತಾ ,ಸುಶ್ಮಿತಾ ಪ್ರಾರ್ಥಿಸಿದರು.ಸಂಜಯ್ ಖಾರ್ವಿ ಎನ್ನೆಸ್ಸೆಸ್ ಒಡನಾಟದ ಅಭಿಪ್ರಾಯ ಹಂಚಿಕೊಂಡರು.ನಿಖಿಲ್ ಖಾರ್ವಿ ಕಾರ‍್ಯಕ್ರಮ ನಿರೂಪಿಸಿದರು. ರಮೇಶ್ ಧನ್ಯವಾದ ಅರ್ಪಿಸಿದರು.
ವರದಿ : ನರೇಂದ್ರ ಎಸ್ ಗಂಗೊಳ್ಳಿ.

Exit mobile version