Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರ ಮಟ್ಟದ ಕ್ರೀಡಾ ಪಟು ಪ್ರತೀಕ್ಷಾಗೆ ಸನ್ಮಾನ

????????????????????????????????????

ಕೊಲ್ಲೂರು: ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರತೀಕ್ಷಾ ಇವರನ್ನು ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕೊಲ್ಲೂರು ಗ್ರಾಪಂ ಸದಸ್ಯ ಜಯಪ್ರಕಾಶ್ ಶೆಟ್ಟಿ, ಕೊಲ್ಲೂರು ಪೋಲಿಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಚಂದ್ರ ಎ. ಕೆ, ಕಾಲೇಜಿನ ಪ್ರಾಂಶುಪಾಲ ಎಸ್.ಅರುಣ್ ಪ್ರಕಾಶ್ ಶೆಟ್ಟಿ ಹಾಗೂ ಉಪನ್ಯಾಸಕರಾದ ಗೋಪಾಲಕೃಷ್ಣ ಜಿ. ಬಿ, ಗೋಪಾಲ ದೇವಾಡಿಗ, ವಾಸುದೇವ ಉಡುಪ, ನಾಗರಾಜ ಅಡಿಗ, ಪೂರ್ಣಿಮಾ ಎನ್ ಜೊಯಿಸ್, ಜ್ಯೋತಿ ಬಿ ಶೆಟ್ಟಿ, ರಾಮ ನಾಯ್ಕ, ಹೆಚ್. ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

Exit mobile version