Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ : ಶ್ರೀ ಮಹಾಂಕಾಳಿ ದೇವಸ್ಥಾನಕ್ಕೆ ಶ್ರೀನಿವಾಸ ಪೂಜಾರಿ ಭೇಟಿ

ಕುಂದಾಪುರ: ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಮಾರಿ ಪೂಜೆ ಉತ್ಸವದ ಸಂದರ್ಭ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಮೀನುಗಾರರ ಪ್ರಕೋಷ್ಠದ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷರಾದ ಜಯಾನಂದ ಖಾರ್ವಿ, ಉಪಾಧ್ಯಕ್ಷರಾದ ಪ್ರಕಾಶ್ ಆರ್. ಖಾರ್ವಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ್ ಕಾವೇರಿ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷ ದಿನಕರ ಪಟೇಲ್, ದೇವಳದ ಮೋಕ್ತೆಸರರಾದ ಪಾಂಡು ಸಾರಂಗ್, ರತ್ನಾಕರ ಖಾರ್ವಿ, ದಾಸ ಹೆಗ್ಡೆ, ಶೇಖರ ಖಾರ್ವಿ, ಮಂಜುನಾಥ ಖಾರ್ವಿ, ಗಣಪತಿ ಪೀತಾಂಬರ ಇನ್ನಿತರರು ಉಪಸ್ಥಿತರಿದ್ದರು.

ಮಾರಿ ಪೂಜೆ ಉತ್ಸವದ ಅಂಗವಾಗಿ ದೇವಳದಲ್ಲಿ ವಿಶೇಷ ಪೂಜೆ, ಪುಷ್ಪಾಲಂಕಾರ, ಭಕ್ತಾಧಿಗಳಿಗೆ ವಿಶೇಷ ಪ್ರಸಾದ ವಿತರಣೆ ಮಾಡಲಾಯಿತು. ಸಾವಿರಾರು ಭಕ್ತರು ಶ್ರೀದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

Exit mobile version