Site icon Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ ದೇವಾಡಿಗರಿಗೆ ಸನ್ಮಾನ

ಕುಂದಾಪುರ: ವಾದ್ಯ ಸಂಗೀತ ಕಲಾವಿದರಾಗಿ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾದ್ಯ ಸಂಗೀತ ಕಲಾವಿದ ಎಸ್.ಎಂ. ಗೋಪಾಲ ದೇವಾಡಿಗ ಅವರ ಸೇವೆ ಸ್ಮರಣೀಯವಾದುದು ಎಂದು ಭಾಂಡ್ಯದ ಕೆಂಜಿಮನೆ ಶ್ರೀ ಹಾಗುಳಿ ದೈವಸ್ಥಾನದ ಆಡಳಿತ ಮೊಕ್ತೇಸರ ಭಾಂಡ್ಯ ಸುಬ್ಬಣ್ಣ ಶೆಟ್ಟಿ ಹೇಳಿದರು.

ಅವರು ಭಾಂಡ್ಯದ ಕೆಂಜಿಮನೆ ಶ್ರೀ ಹಾಗುಳಿ ದೈವಸ್ಥಾನದ ೧೮ನೇ ವರ್ಧಂತ್ಯುತ್ಸವದ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾದ್ಯ ಸಂಗೀತ ಕಲಾವಿದ ಎಸ್.ಎಂ. ಗೋಪಾಲ ದೇವಾಡಿಗ ಅವರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು.

ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಭಾಂಡ್ಯ ಸುಧಾಕರ ಶೆಟ್ಟಿ ಶುಭಾಶಂಸನೆಗೈದರು. ಪ್ರಥಮ ದರ್ಜೆ ಗುತ್ತಿಗೆದಾರ ಭಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ಭಾಂಡ್ಯ ಗೋವಿಂದ್ರಾಯ ಪೈ ಉಡುಪಿ, ಭಾಂಡ್ಯ ಸಂಜೀವ ಪೈ ಮಣಿಪಾಲ, ಭಾಂಡ್ಯ ವೆಂಕಟೇಶ ಪೈ ಮಂಗಳೂರು, ಭಾಂಡ್ಯ ನರಸಿಂಹ ಪೈ ಕುಂದಾಪುರ, ಕರಿಯಣ್ಣ ಶೆಟ್ಟಿ ಕ್ಯಾಕೋಡು ಆಜ್ರಿ ಮೊದಲಾದವರು ಉಪಸ್ಥಿತರಿದ್ದರು. ನಿವೃತ್ತ ಅಧ್ಯಾಪಕ ಹೊಳ್ಮಗೆ ರಘುನಾಥ ಶೆಟ್ಟಿ ಸ್ವಾಗತಿಸಿದರು. ಮಂಜುನಾಥ ನಾಯ್ ಕನ್ನೇರಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕ ಚಂದ್ರ ನಾಯ್ಕ್ ವಂದಿಸಿದರು.

Exit mobile version