Kundapra.com ಕುಂದಾಪ್ರ ಡಾಟ್ ಕಾಂ

ಪ್ರತಿಭೆಯನ್ನು ಗುರುತಿಸುವುದರಿಂದ ಸಾಧನೆಗೆ ಪ್ರೇರಣೆ: ಭರತೇಶ್ ಅಧಿರಾಜ್

ಕುಂದಾಪುರ: ಹುಟ್ಟಿದ ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ವಿಶೇಷತೆ ಅಡಗಿರುತ್ತದೆ. ಆಟ ಪಾಠ ಮೊದಲಾದ ಚಟುವಟಿಕೆಗಳಿಂದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಬಹುದಾಗಿದೆ. ಅವರ ಆಸಕ್ತಿಯ ಕ್ಷೇತ್ರದಲ್ಲಿ ತೋರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಸಾಧನೆಯ ಹಾದಿಯಲ್ಲಿ ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳಲು ಪ್ರೇರಣೆ ಸಿಕ್ಕಂತಾಗುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ಭರತೇಶ್ ಅಧಿರಾಜ್ ಹೇಳಿದರು

ಅವರು ಜಿಲ್ಲಾ ಪಂಚಾಯತ್ ಸಾರ್ವಜಿನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘ ಮತ್ತು ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ಸಂಯುಕ್ತ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಆರ್. ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ವಲಯ೧ರ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್, ರೋಟರಿ ಕ್ಲಬ್ ಕುಂದಾಪುರ ಸೌತ್ ಅಧ್ಯಕ್ಷ ವಾಸುದೇವ ಕಾರಂತ, ರೋಟರಿ ಕುಂದಾಪುರ ಸನ್‌ರೈಸ್ ಅಧ್ಯಕ್ಷ ದಿನಕರ ಪಟೇಲ್, ಜೋನಲ್ ಲೆಫ್ಟಿನೆಂಟ್ ಗಜೇಂದ್ರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಶಿ, ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಅರುಣಕುಮಾರ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶಿವರಾಮ ಭಟ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಸುರೇಂದ್ರ ಶೆಟ್ಟಿ ವಂದಿಸಿದರು.

Exit mobile version