Site icon Kundapra.com ಕುಂದಾಪ್ರ ಡಾಟ್ ಕಾಂ

ಎ.6ಕ್ಕೆ ಕುಂದಾಪುರ, ಗಂಗೊಳ್ಳಿ, ಮರವಂತೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಏ.6ರಂದು ಕುಂದಾಪುರ ಹಾಗೂ ಗಂಗೊಳ್ಳಿಗೆ ಆಗಮಿಸಲಿದ್ದಾರೆ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ. ಕುಂದಾಪುರದಲ್ಲಿ ಬೆಳಿಗ್ಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮಾವೇಶವನ್ನು ಉದ್ಘಾಟಿಸಿದ ಬಳಿಕ, ಮರವಂತೆಯ ಎರಡನೇ ಹಂತದ ಬಂದರು ಕಾಮಗಾರಿ ವೀಕ್ಷಣೆ ನಡೆಸಲಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಂಗೊಳ್ಳಿಯ 102ಕೋಟಿ ಹಾಗೂ ಕೊಡೇರಿಯ 33ಕೋಟಿ ಅನುದಾನದ ಬಂದರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಉಡುಪಿ ಜಿಲ್ಲಾ ಪಂಚಾಯತ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

Exit mobile version