Kundapra.com ಕುಂದಾಪ್ರ ಡಾಟ್ ಕಾಂ

ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಕುಂದಾಪುರ: ಓದು ಮತ್ತು ಬರವಣಿಗೆ ಚಿಂತನೆ ಕ್ಷೀತಿಜ ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಓದು ಮತ್ತು ಬರವಣಿಗೆ ಕ್ರಿಯಾಚರಣೆಯಲ್ಲಿ ಹಾಗೂ ಸಾಂಸ್ಕೃತಿಕವಾಗಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಸಮಕಾಲಿನ ವಿದ್ಯಮಾನಗಳಿಗೆ ವಿದ್ಯಾರ್ಥಿಗಳು ತಮ್ಮ ಬರವಣಿಗೆ ಮೂಲಕ ಸ್ಪಂದಿಸಬೇಕು ಎಂದು ಉಡುಪಿ ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶಪಾಲೆ ಡಾ. ಮಾಧವಿ ಭಂಡಾರಿ ಹೇಳಿದರು.

ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟಿಸಿ ಮಾತನಾಡಿದರು.ಕಾಲೇಜ್ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಸಂಯೋಜಕ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸದರು. ಸಹಸಂಯೋಜಕಿ ರೇಷ್ಮಾ ಶೆಟ್ಟಿ ಅತಿಥಿ ಪರಿಚಯಿಸಿದರು. ವಿದ್ಯಾರ್ಥಿ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ಸಹಸಂಯೋಜಕಿ ಪ್ರೇಮಲಾಕ್ಷಿ ಬಿ.ಕೆ. ವಂದಿಸಿದರು.

Exit mobile version