Site icon Kundapra.com ಕುಂದಾಪ್ರ ಡಾಟ್ ಕಾಂ

ಕಂದಾವರ ರಘುರಾಮ ಶೆಟ್ಟರಿಗೆ ಬಯಲಾಟ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯಕ್ಷರಂಗದ ಧೀಮಂತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಯಕ್ಷಗಾನ ಬಯಲಾಟ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ರಘುರಾಮ ಶೆಟ್ಟರ ನಿವಾಸ ಸ್ವಸ್ತಿಯಲ್ಲಿ ಪ್ರದಾನಿಸಲಾಯಿತು.

ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಪಳ್ಳಿ ಕಿಶನ್ ಹೆಗ್ಡೆ ಐವತ್ತು ಸಾವಿರ ಮೌಲ್ಯದ ಚೆಕ್ ಹಸ್ತಾಂತರಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಘುರಾಮ ಶೆಟ್ಟರ ಮಡದಿ ಹಾಗೂ ಕುಟುಂಬಿಕರು, ಪತ್ರಕರ್ತರಾದ ರಾಮಕೃಷ್ಣ ಹೇರ್ಳೆ, ಶ್ರೀಪತಿ ಹೆಗಡೆ ಹಕ್ಲಾಡಿ ಉಪಸ್ಥಿತರಿದ್ದರು. ಪತ್ರಕರ್ತ ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

Exit mobile version