Kundapra.com ಕುಂದಾಪ್ರ ಡಾಟ್ ಕಾಂ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಒಲಿಯಿತು ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನ

ಅಧ್ಯಕ್ಷರಾಗಿ ವಸಂತಿ ಮೋಹನ ಸಾರಂಗ, ಉಪಾಧ್ಯಕ್ಷರಾಗಿ ರಾಜೇಶ್ ಕಾವೇರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪುರಸಭೆ ದ್ವಿತೀಯ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿ ವಸಂತಿ ಮೋಹನ ಸಾರಂಗ್ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜೇಶ್ ಕಾವೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶಾಕುಂತಲಾ ಪ್ರಕಾಶ್ ಗುಲ್ವಾಡಿ, ವಸಂತಿ ಮೋಹನ ಸಾರಂಗ್ ಹಾಗೂ ರವಿಕಲಾ ಗಣೇಶ್ ಶೇರಿಗಾರ್ ನಾಮಪತ್ರ ಸಲ್ಲಿಸಿದ್ದರೇ, ಉಪಾಧ್ಯಕ್ಷ ಸ್ಥಾನಕ್ಕೆ ರಾಜೇಶ್ ಕಾವೇರಿ ಹಾಗೂ ರವಿರಾಜ ಖಾರ್ವಿ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಶಾಕುಂತಲಾ ಪ್ರಕಾಶ್ ಗುಲ್ವಾಡಿ ಹಾಗೂ ರವಿಕಲಾ ಗಣೇಶ್ ಶೇರಿಗಾರ್ ಹಾಗೂ ರವಿರಾಜ ಖಾರ್ವಿ ನಾಮಪತ್ರ ಹಿಂಡೆದುದರಿಂದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿರೀಕ್ಷಿಸಿ: ಕಾಂಗ್ರೆಸ್‌ನಲ್ಲಿ ಭಿನ್ನಮತ, ಜಯಪ್ರಕಾಶ್ ಹೆಗ್ಡೆ ಅವರ ಅಭ್ಯರ್ಥಿಗೆ ದಕ್ಕಿತು ಅಧ್ಯಕ್ಷ ಪಟ್ಟ.

Kundapura Purasabhe_Vasanthi saranga as President and Rajesh kaveri as vice president elected (1)


Exit mobile version