ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಗಂಗೊಳ್ಳಿಯ ಲೈಟ್‌ಹೌಸ್‌ನ ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್‌ನ ಬೆಳ್ಳಿ ಹಬ್ಬ ಸಮಾರಂಭದ ಸಮಾರೋಪ ಇತ್ತೀಚಿಗೆ ಲೈಟ್‌ಹೌಸ್ ವಠಾರದ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ಸಮೀಪ ಜರಗಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರಮೋದ ಮಧ್ವರಾಜ್ ಮಾತನಾಡಿ, ಸಂಘ ಸಂಸ್ಥೆಗಳು ಗ್ರಾಮದ ಅಭಿವೃದ್ಧಿಗೆ ಪೂರಕವಾಗಿದೆ. ಸಂಘ ಸಂಸ್ಥೆಗಳು ಸಕ್ರೀಯವಾಗಿ ಗ್ರಾಮದ ವಿವಿಧ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸಮಾಜದ ಸಾಧಕರನ್ನು, ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ಶುಭ ಹಾರೈಸಿದರು.
ಗೋವಾದ ಉದ್ಯಮಿ ಎಂ.ಎಂ.ಇಬ್ರಾಹಿಂ ವಿದ್ಯಾರ್ಥಿ ವೇತನ ವಿತರಿಸಿದರು. ಗಂಗೊಳ್ಳಿ ಚರ್ಚಿನ ಧರ್ಮಗುರು ಅಲ್ಬರ್ಟ್ ಕ್ರಾಸ್ತಾ ಸ್ಮರಣ ಸಂಚಿಕೆಯನ್ನು ಅನಾವರಣಗೊಳಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ಸಾಹಿತಿ ಕೋ.ಶಿವಾನಂದ ಕಾರಂತ್, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಕೆ.ನಾಗ ಖಾರ್ವಿ ಶುಭ ಹಾರೈಸಿದರು. ಇದೇ ಸಂದರ್ಭ ಭಾರತೀಯ ಗಡಿ ರಕ್ಷಣಾ ಪಡೆಯ ಯೋದ ಪ್ರದೀಪ ಖಾರ್ವಿ ಬಸ್ರೂರು, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ರಕ್ಷಾ ಗೋಪಾಲ ಗಂಗೊಳ್ಳಿ ಹಾಗೂ ಕರಾಟೆ ಪಟು ಶಶಾಂಕ ಶೆಣೈ ಗಂಗೊಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಿ.ಟಿ.ಮಂಜುನಾಥ, ಸಂಘದ ಗೌರವಾಧ್ಯಕ್ಷ ಮಡಿ ಮಾಧವ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ನಾಗರಾಜ ಖಾರ್ವಿ ಆರ್.ಎನ್. ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿ.ಕೇಶವ ಖಾರ್ವಿ ವರದಿ ವಾಚಿಸಿದರು. ಮಹೇಶ ಎಸ್.ಆರ್.ಜಿ., ನರೇಂದ್ರ ಎಸ್.ಗಂಗೊಳ್ಳಿ ಮತ್ತು ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ಮಡಿ ವಿಶ್ವನಾಥ ಖಾರ್ವಿ ವಂದಿಸಿದರು.

