ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಬೆಂಗಳೂರಿನ ಪ್ರಸಿದ್ದ ವೈದ್ಯ ಡಾ.ಬಿ.ಗೋವರ್ಧನ್ ಹೆಗ್ಡೆ (70) ಭಾನುವಾರ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಕಾರ್ಕಳ ತಾಲ್ಲೂಕಿನ ಬೋಳಮಡಿಮಾರ ಗುತ್ತುವಿನ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿಯನ್ನು ಪಡೆದುಕೊಂಡ ಬಳಿಕ ೨೦ ವರ್ಷಗಳ ಕಾಲ ಅರಸಿಕೆರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಬಳಿಕ ಬೆಂಗಳೂರಿನ ಇಲ್ಯಾಸ್‌ನಲ್ಲಿ ಸೇವೆ ಸಲ್ಲಿಸಿದ್ದರು.
ಹುಯ್ಯಾರು ಪಟೇಲ್ ಹಿರಿಯಣ್ಣ ಶೆಟ್ಟಿ ಹಾಗೂ ಕಾರ್ಕಳದ ಮಾಜಿ ಶಾಸಕ ಬೋಳ ರಘುರಾಮ ಶೆಟ್ಟಿಯವರ ಅಳಿಯನಾಗಿದ್ದ ಅವರು ವಿಧಾನಪರಿಷತ್ ಸದಸ್ಯ ಕೆ.ಪ್ರತಾಪ್‌ಚಂದ್ರ ಶೆಟ್ಟಿಯವರ ಭಾವನವರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.