ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಮೌಲ್ಯಾಧಾರಿತ ಜ್ಞಾನಬಂಧು ಪುಸ್ತಕದ ಶ್ಲೋಕ ಕಂಠ ಪಾಠ ಸ್ಪರ್ಧೆಯಲ್ಲಿ ಕೋಟೇಶ್ವರ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಸುಷ್ಮಾ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಹುಮಾನ ನೀಡಿ ಶುಭ ಹಾರೈಸಿದರು.