ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಊಳುವವನೇ ಹೊಲದೊಡೆಯ ಎಂಬುದನ್ನು ಪ್ರತಿಪಾದನೆ ಮಾಡಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಕೃಷಿ ಕಾಯಕದ ಮೂಲಕ ಈ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡಿದ್ದರು. ಹಿಂದುಳಿದ ವರ್ಗದವರಲ್ಲೂ ಕೃಷಿಯಲ್ಲಿ ಆಸಕ್ತಿ ಮೂಡಿಸಿದ್ದ ಅವರು ಅಪರೂಪದ ನಾಯಕತ್ವ ಗುಣ ಬೆಳೆಸಿಕೊಂಡಿದ್ದರು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಕುಂದಾಪುರ ತಾಲೂಕ್ ಪಂಚಾಯತ್, ಕಂದಾಯ ಇಲಾಖೆ, ಕುಂದಾಪುರ ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕುಂದಾಪುರ ತಾಪಂ ಸಭಾಂಗಣದಲ್ಲಿ ನಡೆದ ಬಾಬು ಜಗಜೀವನ್ ರಾಮ್ ಅವರ ೧೦೯ನೇ ಜನ್ಮ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿ ಬಾಬು ಜಗಜೀವನ್ ರಾಮ್ ಅವರು ಸಾಗಬಂದ ದಾರಿಯಲ್ಲಿ ನಾವು ಸಾಗುವ ಮೂಲಕ ಅವರಿಗೆ ಗೌರವ ಸಲ್ಲಿಸುವುದಲ್ಲದೇ ಅವರ ಕನಸು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಸಾರಂಗ ಅಧ್ಯಕ್ಷತೆ ವಹಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಸ್ರೂರು ಶ್ರೀ ಶಾರದಾ ಕಾಲೇಜ್ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಎಂ.ದಿನೇಶ್ ಹೆಗ್ಡೆ ಉಪನ್ಯಾಸ ಮಾಡಿದರು.
ಮಂಗಳೂರು ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಹಿರಿಯಣ್ಣ, ಕುಂದಾಪುರ ಡಿಎಸ್ಪಿ ಎಂ.ಮಂಜುನಾಥ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಇದ್ದರು. ಕುಂದಾಪುರ ತಹಸೀಲ್ದಾರ್ ಗಾಯತ್ರಿ ಎನ್.ನಾಯ್ಕ್ ಸ್ವಾಗತಿಸಿದರು. ಅಕ್ಷರ ದಾಸೋಹ ಅಧಿಕಾರಿ ಸೀತಾರಾಮ ಶೆಟ್ಟಿ ನಿರೂಪಿಸಿದರು. ಕುಂದಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕಿ (ಗ್ರೇಡ್_2) ಎಸ್.ಎಸ್.ಸಿದ್ದನ್ ಅತಿಥಿಗಳ ಗೌರವಿಸಿದರು.