Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಆಯ್ಕೆ: ಕುಂದಾಪುರ ತಾಲೂಕಿನಲ್ಲಿ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಿ. ಎಸ್. ಯಡಿಯೂರಪ್ಪನವರು ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆ ಬಿಜೆಪಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಿಸಿದರು. ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ಎಂ ಸುಕುಮಾರ್ ಶೆಟ್ಟಿ, ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ರಾಜೇಶ್ ಕಾವೇರಿ ನೂತನ ರಾಜ್ಯಾಧ್ಯಕ್ಷರಿಗೆ ಶುಭಕೋರಿದ್ದಾರೆ.

ಬೈಂದೂರು ಬೈಪಾಸ್ ಬಳಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿಕೊಂಡು ಬಿಎಸ್‌ವೈಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಜಿಪಂ ಸದಸ್ಯ ಕೆ. ಬಾಬು ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಾಂತ್ಯದ ಅಧ್ಯಕ್ಷ ಬಾಲಕೃಷ್ಣ ಬೈಂದೂರು, ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಗೋಪಾಲ ಕಾಂಚನ್, ತಾಪಂ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಉಮೇಶ್ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿ ಸದಾಶಿವ ಡಿ. ಪಡುವರಿ, ಪ್ರಿಯದರ್ಶಿನಿ ಹಾಗೂ ಮೂರು ಗ್ರಾಪಂ ಸದಸ್ಯರು ಹಾಜರಿದ್ದರು.

ಉಪ್ಪುಂದದಲ್ಲಿ ಬಿಜೆಪಿ ಕಾರ್ಯಕರ್ತರು ಬಿಎಸ್‌ವೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ ಬಟವಾಡಿ, ಗ್ರಾಪಂ ಮಾಜಿ ಅಧ್ಯಕ್ಷ ಜಗನ್ನಾಥ ಎಂ., ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಬಿಹೆಚ್‌ಕೆ ಕುಮಾರ್ ಖಾರ್ವಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Byndoor BJP Celebrate for Yadirurappa elected as state bjp president (2)

Exit mobile version