Kundapra.com ಕುಂದಾಪ್ರ ಡಾಟ್ ಕಾಂ

ಶಿಕ್ಷಣ ಉದ್ಯೋಗಕ್ಕಿಂತ ಮೊದಲು ಜ್ಞಾನವನ್ನು ತಂದುಕೊಡಬೇಕು: ಆನಂದ ಸಿ.ಕುಂದರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜ್ಞಾನವನ್ನು ಪಡೆಯಲು ಶಿಕ್ಷಣ ಇರಬೇಕೇ ಹೊರತು ಉದ್ಯೋಗಕ್ಕಾಗಿ ಅಲ್ಲ. ಶಿಕ್ಷಣದಿಂದ ಪಡೆದ ಜ್ಞಾನದ ಮೂಲಕ ಸ್ವಂತ ಕಾಲಮೇಲೆ ನಿಲ್ಲುವ ಉದ್ಯೋಗ ಸೃಷ್ಟಿಸಿಕೊಳ್ಳಬೇಕು ಎಂದು ಕೋಟ ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಹೇಳಿದರು

ಇಲ್ಲಿನ ಭಂಡಾರ್‌ಕಾರ್ಸ್ ಕಾಲೇಜ್ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆದ ಭಂಡಾರ್‌ಕಾರ‍್ಸ್ ಕಾಲೇಜ್ ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ ಮತ್ತು ಗುರುವಂದನೆ ಉದ್ಘಾಟಿಸಿ ಮಾತನಾಡುತ್ತಿದ್ದರು.

ಭಂಡಾರ್‌ಕಾರ್ಸ್ ಕಾಲೇಜ್ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಚಲನಚಿತ್ರ ನಾಯಕ ನಟ ನಿರ್ದೇಶಕ ರವಿ ಬಸ್ರೂರು, ಹಳೆ ವಿದ್ಯಾರ್ಥಿ ಸಂಘ ಕಾರ‍್ಯದರ್ಶಿ ವಕ್ವಾಡಿ ರಂಜಿತ್ ಕುಮಾರ್ ಶೆಟ್ಟಿ ಇದ್ದರು.ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವದಲ್ಲಿ ಭಂಡಾರ್‌ಕಾರ್ಸ್ ಕಾಲೇಜ್ ರಂಗಅಧ್ಯಯನ ಕೇಂದ್ರ ನಿರ್ದೇಶಕ ವಸಂತ ಬನ್ನಾಡಿ, ಕನ್ನಡ ವಿಭಾಗದ ನಿವೃತ್ತ ಉಪನ್ಯಾಸಕ ಗೋವಿಂದಪ್ಪ ಅವರಿಗೆ ಗುರು ವಂದನೆ ಸಲ್ಲಿಸಲಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಕೆ.ಕಾರ್ತಿಕೇಯ ಮಧ್ಯಸ್ಥೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ನ್ಯಾಯವಾದಿ ರಾಘವೇಂದ್ರ ಚರಣ ನಾವಡ ನಿರೂಪಿಸಿದರು. ಪ್ರಶಾಂತ್ ಹೆಗ್ಡೆ ಮತ್ತು ಅರ್ಥ ಶಾಸ್ತ್ರ ವಿಭಾಗದ ಸುಪ್ರಿತಾ ಸನ್ಮಾನಿತರ ಪರಿಚಯ ಮಾಡಿದರು.
ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ, ಛದ್ಮವೇಶ ಸ್ವರ್ಧೆ, ಹಳೆ ವಿದ್ಯಾರ್ಥಿಗಳಿಂದ ಚಂಡೆ ವಾದನ, ಮತ್ತು ವೀರ ಅಭಿಮನ್ಯ ಯಕ್ಷಗಾನ ನಡೆಯಿತು.

Bhandarkars college old college association - Karthikeya Madyasta (1)

Exit mobile version