Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾ ಅಬಕಾರಿ ವಿಶೇಷ ದಳ ಎಸ್ಸೈ ಶಂಕರ್ ಎ.ಪಿ. ನಿಧನ

ಕುಂದಾಪುರ: ಉಡುಪಿ ಜಿಲ್ಲಾ ಅಬಕಾರಿ ವಿಶೇಷ ದಳ ಎಸ್ಸೈ ಶಂಕರ್ ಎ.ಪಿ.(58) ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾದರು.  35 ವರ್ಷದಿಂದ ಅಬಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಗುರುವಾರ ಬೆಳಗ್ಗೆ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸಂಜೆಯ ವೇಳೆಗೆ ಮೃತರಾದರು. ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಜಿರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಮೃತರ ಮನೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ, ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಮತ್ತು ಸಮಾಜದ ಅನೇಕ ಮುಖಂಡರ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

Exit mobile version