Kundapra.com ಕುಂದಾಪ್ರ ಡಾಟ್ ಕಾಂ

ನಾಡಾ: ಹಸೆಮಣೆ ಏರಬೇಕಿದ್ದ ಯುವಕ ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ.ಎ.18: ಸದ್ಯದಲ್ಲೇ ಹಸೆಮಣೆ ಏರಬೇಕಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಿಕ್ಕು ಯಾನೆ ಸುಶೀಲ ಮಡಿವಾಳ್ತಿ ಎಂಬುವವರ ಪುತ್ರ ಮಂಜುನಾಥ ನಾಡ (26) ನೇಣಿಗೆ ಶರಣಾದ ಯುವಕ.

ಬೆಂಗಳೂರಿನಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಮಂಜುನಾಥನಿಗೆ ಕೆಲವು ತಿಂಗಳುಗಳ ಹಿಂದಷ್ಟೇ ಕೆದೂರಿನ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಮೇ.2ರಂದು ಮದುವೆ ನಡೆಯುವುದಿತ್ತು. ಆ ಕಾರಣದಿಂದಾಗಿ ಊರಿನಲ್ಲಿಯೇ ಇದ್ದ ಮಂಜುನಾಥ ಸೋಮವಾರ ಏಕಾಏಕಿ ನಾಪತ್ತೆಯಾಗಿದ್ದರಿಂದ ಹುಡುಕಾಟ ನಡೆಸಿದಾಗ ಮನೆಯ ಸಮೀಪದ ಹಾಡಿಯೊಂದರಲ್ಲಿ ನೇಣು ಬಿಗಿದುಕೊಂಡಿರುವುದು ತಿಳಿದುಬಂದಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಮದುವೆ ತಯಾರಿಯಲ್ಲಿದ್ದ ಯುವಕ ಏಕಾಏಕಿ ಆತ್ಮಹತ್ಯೆ ನಿರ್ಣಯ ಕೈಗೊಂಡಿರುವುದು ಅವರ ಬಂಧುಗಳು ಹಾಗೂ ಸ್ನೇಹಿತರನ್ನು ಆತಂಕಕ್ಕೆ ನೂಕಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. / ಕುಂದಾಪ್ರ ಡಾಟ್ ಕಾಂ ಸುದ್ದಿ.

Manjunath-Nada-Sucide1

Exit mobile version