Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ಜ್ಞಾನದ ದೀಪ ಹಚ್ಚಿ ಬದುಕಿನ ದಾರಿ ತೋರುವ ಜವಾಬ್ದಾರಿ ಗುರುವಿನದ್ದು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರತಿ ವಿದ್ಯಾರ್ಥಿಗಳ ಬದುಕಿನಲ್ಲಿ ಜ್ಞಾನದ ದೀಪ ಹಚ್ಚಿ ಬದುಕಿನ ದಾರಿ ತೋರುವ ಜವಾಬ್ದಾರಿ ಗುರುವಿನ ಮೇಲಿದೆ. ಗುರುವು ತೋರಿದ ದಾರಿಯಲ್ಲಿ ಮುನ್ನಡೆದರೇ ಯಶಸ್ಸು ಕಾದಿದೆ. ಅಧಿಕ ಅಂಕ ಗಳಿಕೆಯ ಹೊರತಾಗಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರಿಯಾಶೀಲತೆಯನ್ನು ಶಿಕ್ಷಣದಲ್ಲಿ ಮೂಲಕ ಹೊರಹಾಕಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ರಾಜಶೇಖರ ವೆಂಕಣಗೌಡ ಪಾಟೀಲ ಹೇಳಿದರು.

ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಕುಂದಾಪುರದಂತಹ ತಾಲೂಕು ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಎಲ್ಲರಿಗೂ ಸಮಾನವಾದ ಶಿಕ್ಷಣ ದೊರೆಯುವಂತಾಗಬೇಕು ಎಂಬ ಆಶಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನೀಯ. ಅಂತಹ ಮನಸ್ಥಿತಿಯನ್ನು ಕೆಲವರಿಂದ ಮಾತ್ರ ನಿರೀಕ್ಷಿಸಲು ಸಾಧ್ಯವಿದೆ ಎಂದರು.
ಕುಂದಪ್ರಭ ಪತ್ರಿಕೆಯ ಸಂಪಾದಕ ಯು.ಎಸ್. ಶೆಣೈ, ಕೆನರಾ ಬ್ಯಾಂಕ್ ಚೀಫ್ ಮ್ಯಾನೇಜರ್ ವಿಷ್ಣುದಾಸ ಭಟ್, ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಸದಸ್ಯ ಅನಿಲ್ ಚಾತ್ರ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ವರದಿ ವಾಚಿಸಿದರು. ಉಪನ್ಯಾಸಕಿ ಪ್ರೀತಿ ಹೆಗ್ಡೆ ಸ್ವಾಗತಿಸಿದರು, ಉಪನ್ಯಾಸಕಿ ಅವಿತಾ ಕೋರಿಯಾ ವಂದಿಸಿದರು. ಉಪನ್ಯಾಸಕಿ ವೀಣಾ ಭಟ್, ಉಪನ್ಯಾಸಕ ವಿಘ್ನೇಶ್ವರ ರಾವ್ ಕಾರ್ಯಕ್ರಮ ನಿರೂಪಿಸಿದರು.

Exit mobile version