Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ : ಆರ್ಟ್ ಫೆಸ್ಟ್ ಬೇಸಿಗೆ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವವನ್ನು ವಿಕಸಿಸಿ, ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸುತ್ತದೆ. ಇಲ್ಲಿ ಕಲಿಯುವ ಅನೇಕ ಸಂಗತಿಗಳು ವಿದ್ಯಾರ್ಥಿ ಜೀವನದಲ್ಲಿ ಬಹಳ ಉಪಯುಕ್ತವಾಗುತ್ತದೆ ಎಂದು ಕುಂದಾಪುರ ಚಿನ್ಮಯ್ ಆಸ್ಪತ್ರೆಯ ಡಾ. ಬಾಲಕೃಷ್ಣ ಶೆಟ್ಟಿ ಹೇಳಿದರು.

ಅವರು ರೋಟರಿ ಕ್ಲಬ್ ಕುಂದಾಪುರ, ತ್ರಿವರ್ಣ ಆರ್ಟ್ ಕ್ಲಾಸ್ ಕುಂದಾಪುರ ಹಾಗೂ ಕೋಣಿಯ ಮಾತಾ ಮಾಂಟೆಸ್ಸೊರಿ ಶಾಲೆಯ ಆಶ್ರಯದಲ್ಲಿ ಕುಂದಾಪುರದ ರೋಟರಿ ನರ್ಸರಿ ಸ್ಕೂಲ್‌ನಲ್ಲಿ ನಡೆದ ೧೦ ದಿನಗಳ ಆರ್ಟ್ ಫೆಸ್ಟ್-2016 ಬೇಸಿಗೆ ರಜಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಗುತ್ತಿಗೆದಾರರಾದ ಕೆ.ಆರ್.ನಾಯ್ಕ್, ರೋಟರಿ ಕಾರ್ಯದರ್ಶಿ ಸಂತೋಷ್ ಕೋಣಿ ಉಪಸ್ಥಿತರಿದ್ದರು. ಶಿಬಿರ ನಿರ್ದೇಶಕ ಹರೀಶ್ ಸಾಗಾ ಸ್ವಾಗತಿಸಿದರು. ಮಾತಾ ಮಾಂಟೆಸ್ಸೊರಿ ಶಾಲೆಯ ಪ್ರಾಂಶುಪಾಲೆ ಭಾರತಿ ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವೈಷ್ಣವಿ ಭಟ್ ವಂದಿಸಿದರು.

Exit mobile version