Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಣಿ : ಮಾಂಟೆಸ್ಸೊರಿ ಶಾಲಾ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಕ್ಕಳ ಉಜ್ವಲ ಭವಿಷ್ಯಕ್ಕೆ ಪೂರ್ವ ಪ್ರಾಥಮಿಕ ಶಿಕ್ಷಣ ಅತ್ಯಂತ ಭದ್ರ ತಳಪಾಯ ಅವರನ್ನು ಸ್ವತಂತ್ರ ಹಾಗೂ ಸ್ವಾವಲಂಭಿಗಳಾಗಿ ದಿನ ನಿತ್ಯದ ಬದುಕಿನಲ್ಲಿ ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳುವ ಕೌಶಲ್ಯವನ್ನು ಮಾಂಟೇಸ್ಸೊರಿ ಶಿಕ್ಷಣ ಹೆಚ್ಚಿಸುತ್ತದೆ ಎಂದು ಎಕ್ಸೆಲೆಂಟ್ ಪಿಯು ಕಾಲೇಜಿನ ಪ್ರಾಂಶುಪಾಲೆ ಚಿತ್ರ ಕಾರಂತ್ ಹೇಳಿದರು.

ಅವರು ಕೋಣಿಯ ಮಾತಾ ಮಾಂಟೆಸ್ಸೊರಿ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಲೋಚನ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ವ್ಯವಸ್ಥಾಪಕ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಪ್ರಾಂಶುಪಾಲೆ ಭಾರತಿ ಪ್ರಕಾಶ್ ಶೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕಿ ಸುಮಿತ್ರ ವಂದಿಸಿದರು. ಗೀತಾ ಶೆಟ್ಟಿ, ಶಕ್ತಿ ಶೆಟ್ಟಿ, ಸಹಕರಿಸಿದರು. ಪ್ರಭಾವ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಾಂಟೆಸ್ಸೊರಿ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Exit mobile version