Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು: ಸುಸಜ್ಜಿತ ಮೀನು ಮಾರುಕಟ್ಟೆ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಿರೂರು: ಮಾದರಿ ಗ್ರಾಮವಾಗಿ ರೂಪುಗೊಳ್ಳುತ್ತಿರುವ ಶಿರೂರಿಗೆ ಸುಸಜ್ಜಿತ ಮೀನು ಮಾರುಕಟ್ಟೆ ರಾಜ್ಯ ಸರಕಾರದ ಮಹತ್ವದ ಕೊಡುಗೆ. ಮಾದರಿ ಗ್ರಾಮ ಯೋಜನೆಯನ್ವಯ ಶಿರೂರು ಸಮಗ್ರ ಅಭಿವೃದ್ಧಿ ಸಾಧಿಸಲಿದೆ. ಅಳ್ವೆಗದ್ದೆ ಮೀನುಗಾರಿಕಾ ಬಂದರಿನ ಮೊದಲ ಹಂತದ ಕಾಮಗಾರಿ ಮುಗಿದ ತಕ್ಷಣ ಎರಡನೆ ಹಂತವನ್ನು ಕೈಗೆತ್ತಿಕೊಳ್ಳಲಾಗುವುದು. ಎಲ್ಲ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಆಸ್ಪತ್ರೆ ನಿರ‍್ಮಾಣ ಶೀಘ್ರ ಆಗಲಿವೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಶಿರೂರಿನ ಮಾರುಕಟ್ಟೆ ಪ್ರದೇಶದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ 90 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸುಸಜ್ಜಿತ ಮೀನು ಮಾರುಕಟ್ಟೆ ಸಂಕೀರ್ಣಕ್ಕೆ ಮಂಗಳವಾರ ಅವರು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಿರೂರು ಗ್ರಾಪಂ ಅಧ್ಯಕ್ಷೆ ಜಿ.ಯು. ದಿಲ್‌ಶಾದ್ ಬೇಗಂ ಅಧ್ಯಕ್ಷತೆವಹಿಸಿದ್ದರು. ಶಿರೂರಿಗೆ ಹೈ-ಟೆಕ್ ಮಾರ್ಕೇಟ್ ನಿರ್ಮಾಕ್ಕೆ ರೂ. ೯೦ ಲಕ್ಷ ಅನುದಾನ ನೀಡಿದ ನೀಡಿದ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವರಿಗೆ ಂಚಾಯತ್ ವತಿಯಿಂದ ಪೌರಸನ್ಮಾನ ನೀಡಲಾಯಿತು. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೌಂಡೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಿರಿಯಣ್ಣ ಚಾತ್ರಬೆಟ್ಟು, ಗ್ರಾಪಂ ಉಪಾಧ್ಯಕ್ಷ ನಾಗೇಶ್ ಅಳ್ವೆಗದ್ದೆ, ಜಿಪಂ ಸದಸ್ಯರಾದ ಸುರೇಶ್ ಬಟವಾಡಿ, ಗೌರಿ ದೇವಾಡಿಗ, ಮಾಜಿ ಸದಸ್ಯರಾದ ಮದನ್ ಕುಮಾರ್, ಎಸ್. ರಾಜು ಪೂಜಾರಿ,, ತಾಪಂ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಮೌಲಾನಾ ದಸ್ತಗೀರ್ ಸಾಹೇಬ್, ಜಗದೀಶ್ ದೇವಾಡಿಗ, ತಾಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಸ್ವಾಮಿ. ಇಲಾಖಾ ಇಂಜಿನೀಯರ್ ಟಿ. ಎಸ್. ರಾಥೋಡ್ ಮೊದಲಾದವರು ಉಪಸ್ಥಿತರಿದ್ದರು. ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ಸೋಜಾ ಸ್ವಾಗತಿಸಿ, ಪಿಡಿಒ ನಾಗವೇಣಿ ನಾಯ್ಕ್ ವಂದಿಸಿದರು. ಶಿಕ್ಷಕ ಪ್ರಕಾಶ್ ಮಾಕೋಡಿ ನಿರೂಪಿಸಿದರು.

Exit mobile version