Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜು : ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಸ್ಪಷ್ಟ ನಿರ್ಧಾರ, ಸಮರ್ಪಣಾ ಮನೋಭಾವ, ಶ್ರದ್ಧೆ ಈ ಮೂರು ಗುಣಗಳನ್ನು ಬೆಳಸಿಕೊಳ್ಳಬೇಕು. ಅದರ ಜೊತೆಗೆ ಶಿಸ್ತು ಕೇಂದ್ರಿತ ಬದುಕಿಗೆ ಒತ್ತು ಕೊಡುವ ಮೂಲಕ ಸಪ್ಪ್ರಜೆಗಳಾಗಿ ಎಂದು ಸೈಂಟ್ ಮೇರಿಸ್ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಲೂಯಿಸ್ ಜೆ ಫೆರ್ನಾಂಡಿಸ್ ಹೇಳಿದರು.

ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡಿಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ ಉಪಸ್ಥಿತರಿದ್ದರು. ಪ್ರಾಂಶುಪಾಲ ದೋಮ ಚಂದ್ರಶೇಖರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಉಪನ್ಯಾಸಕಿ ಕು. ಜ್ಯೋತಿ ಮೊಗವೀರ್ ಸ್ವಾಗತಿಸಿದರು. ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ವಂದಿಸಿದರು. ಉಪನ್ಯಾಸಕಿ ಅವಿತಾ ಕೋರಿಯಾ ಕಾರ್ಯಕ್ರಮ ನಿರೂಪಿಸಿದರು.

Exit mobile version