Kundapra.com ಕುಂದಾಪ್ರ ಡಾಟ್ ಕಾಂ

ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಪರಿವರ್ತನೆ: ಅಮರಪ್ರಸಾದ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ
ಹೆಮ್ಮಾಡಿ: ಅಧಿಕಾರ ಮತ್ತು ಜವಾಬ್ದಾರಿ ಎರಡನ್ನೂ ಸಮಾನವಾಗಿ ನಿರ್ವಹಿಸಿದಾಗ ಅಭಿವೃದ್ಧಿ. ಜೀವನದಲ್ಲಿ ಶಿಸ್ತು, ಬದ್ಧತೆಯನ್ನು ಅಳವಡಿಸಿಕೊಂಡಾಗ ಮಾತ್ರ ವ್ಯವಸ್ಥೆ ಸುಗಮ. ಸಮಾಜದಲ್ಲಿ ಅತ್ಯಂತ ತಳಮಟ್ಟದಲ್ಲಿ ಜೀವಿಸುತ್ತಿರುವ ಜನರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವಂತೆ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆ ತರುವಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ ತಾಲೂಕು ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕಟ್‌ಬೇಲ್ತೂರು ಶ್ರೀ ಭದ್ರಮಹಾಕಾಳಿ ಸಭಾಭವನದಲ್ಲಿ ಶನಿವಾರ ಜರಗಿದ ಹೆಮ್ಮಾಡಿ ಎ, ಕಟ್‌ಬೇಲ್ತೂರು ಮತ್ತು ದೇವಲ್ಕುಂದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಕಟ್‌ಬೇಲ್ತೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಅನ್ನಪೂರ್ಣ ಅವರು ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಭದ್ರಮಹಾಕಾಳಿ ದೈವಸ್ಥಾನದ ಮೊಕ್ತೇಸರ ಹೆರಿಯಣ್ಣ ಶೆಟ್ಟಿ ಅವರು ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ, ತಾ. ಪಂ. ಸದಸ್ಯ ಎಚ್. ರಾಜು ದೇವಾಡಿಗ, ಜಿ. ಪಂ. ಸದಸ್ಯೆ ಶೋಭಾ ಜಿ. ಪುತ್ರನ್, ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಹರೀಶ್ ಭಂಡಾರಿ, ಕಟ್‌ಬೇಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಸೂಯ ಆಚಾರ್ಯ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಮೊದಲಾದವರು ಉಪಸ್ಥಿತರಿದ್ದರು. ಮೂರು ಒಕ್ಕೂಟಗಳ ನಿಕಟಪೂರ್ವ ಅಧ್ಯಕ್ಷರಾದ ಭಾಗೀರಥಿ, ಅನ್ನಪೂರ್ಣ ಮತ್ತು ಶಶಿಧರ ಶೆಟ್ಟಿ ಅವರು ನೂತನ ಅಧ್ಯಕ್ಷರಾದ ಯೋಗೀಶ್ ಆಚಾರ್ಯ, ಚಂದ್ರ ಮುಳ್ಳುಕುಂಟ್ ಮತ್ತು ಚಂದ್ರಶೇಖರ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸಿ ಬಳಿಕ ಅನಿಸಿಕೆ ಹಂಚಿಕೊಂಡರು. ಸ್ವಸಹಾಯ ಸಂಘದ ಸದಸ್ಯೆ ಮಮತಾ ಸ್ವಾಗತಿಸಿದರು. ಸೇವಾಪ್ರತಿನಿಧಿ ಸುನೀತಾ ಪಸನ್ನ ವರದಿ ವಾಚಿಸಿದರು. ಜಯಶ್ರೀ ಪರಿಚಯಿಸಿದರು. ಮೇಲ್ವಿಚಾರಕ ಚಂದ್ರ ಮರಾಠೆ ಕಾರ್ಯಕ್ರಮ ನಿರ್ವಹಿಸಿದರು. ಸೇವಾಪ್ರತಿನಿಧಿ ರೇಖಾ ವಂದಿಸಿದರು.

Exit mobile version