ಕುಂದಾಪ್ರ ಡಾಟ್ ಕಾಂ ವರದಿ |
ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬದುಕು ರೂಪಿಸುವ ಮಹತ್ತರ ಘಟ್ಟ. ಈ ಹಂತದಲ್ಲಿ ಸರಿಯಾದ ಮಾರ್ಗದರ್ಶನ ಹಾಗೂ ಶಿಕ್ಷಣ ದೊರೆತರೆ ಪ್ರತಿಯೊಬ್ಬರ ಜೀವನವೂ ಉಜ್ವಲವಾಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕ ವಾತಾವರಣ ನಿರ್ಮಿಸಬೇಕೆಂಬ ಉದ್ದೇಶದೊಂದಿಗೆ 2003ರಲ್ಲಿ ಸ್ಥಾಪನೆಗೊಂಡ ಕುಂದಾಪುರ ಆರ್.ಎನ್. ಶೆಟ್ಟಿ. ಪಿಯು ಕಾಲೇಜು ಇಂದು ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳ ಪೈಕಿ ಅಗ್ರಗಣ್ಯ ಸ್ಥಾನದಲ್ಲಿ ಗುರುತಿಸಿಕೊಂಡಿದೆ.
ಉಡುಪಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ವಿದ್ಯಾರ್ಜನೆಗಾಗಿ ಬರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪಿಯು ಶಿಕ್ಷಣವನ್ನು ಕಾಲೇಜಿನಲ್ಲಿ ನೀಡುತ್ತಾ ಬರಲಾಗಿದೆ. ಈ ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದು ತೆರಳಿರುವ ಅದೆಷ್ಟೊ ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಉತ್ತಮ ಹುದ್ದೆಗಳನ್ನಲಂಕರಿಸಿ, ಉದ್ಯಮವನ್ನು ನಡೆಸುತ್ತಾ ಮಾದರಿಯಾಗಿ ಜೀವನವನ್ನು ರೂಪಿಸಿಕೊಂಡಿದ್ದಾರೆ. ಸಂಸ್ಥೆಯ ನುರಿತ ಹಾಗೂ ಅನುಭವಿ ಉಪನ್ಯಾಸಕ ವೃಂದವು ತಮ್ಮ ಅನುಭವವನ್ನು ವಿದ್ಯಾರ್ಥಿಗಳಿಗೆ ಧಾರೆಯೆರೆದು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಆರ್‌ಎನ್‌ಎಸ್ ಪಿಯು ಕಾಲೇಜು ಆರಂಭದಿಂದ ಇಂದಿನವರೆಗೂ ಹಲವು ದಾಖಲೆಗಳನ್ನೇ ಮಾಡಿದೆ. ದ್ವಿತೀಯ ಪಿ.ಯು ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯಲ್ಲಿ ವಿಶಿಷ್ಟವಾದ ಸಾಧನೆ ಮಾಡಿರುವ ಹೆಗ್ಗಳಿಕೆ ಕಾಲೇಜಿನದ್ದು. ಹಲವಾರು ವರ್ಷಗಳಿಂದ ಶೇ. 95ಕ್ಕಿಂತ ಹೆಚ್ಚಿನ ಫಲಿತಾಂಶ ಪಡೆಯುತ್ತಾ ಬಂದಿದ್ದ ಕಾಲೇಜು 2013ರಲ್ಲಿ ಶೇ. 100 ಫಲಿತಾಂಶ ಪಡೆದಿತ್ತು. ಕಳೆದ 2014-15ನೇ ಸಾಲಿನಲ್ಲಿ ಶೇ. 98.8% ರಷ್ಟು ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಕುಳಿತ 276 ವಿದ್ಯಾರ್ಥಿಗಳಲ್ಲಿ 104 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರೇ 159 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವುದು ಹೆಮ್ಮೆಯ ಸಂಗತಿ. ದ್ವಿತೀಯ ಪಿ.ಸಿ.ಎಂ.ಬಿ. ವಿದ್ಯಾರ್ಥಿನಿ ನಮೃತಾ ಜಿ ನಾಯಕ್ 600ರಲ್ಲಿ 592 ಅಂಕಗಳನ್ನು ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ಕರ್ನಾಟಕ ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದಿರುವುದು ಹಾಗೂ ಅದೇ ತರಗತಿಯ ವಿದ್ಯಾರ್ಥಿನಿ ಸಹನಾ 589 ಅಂಕಪಡೆದು ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದಿರುವುದು ದೊಡ್ಡ ಸಾಧನೆಯೇ ಸರಿ. ಕುಂದಾಪ್ರ ಡಾಟ್ ಕಾಂ ವರದಿ.
ಸೈನ್ಸ್, ಕಾಮರ್ಸ್ ವಿಭಾಗ
ಕಾಲೇಜಿನಲ್ಲಿ ಸತತವಾಗಿ ಮೂರು ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಸಂಸ್ಥೆಯ ಸಾಧನೆಯೇ ಸರಿ. ಕಳೆದ ಬಾರಿ ಜೆ.ಇ.ಇ. ಪರೀಕ್ಷೆಯಲ್ಲಿ 14 ವಿದ್ಯಾರ್ಥಿಗಳು ಪಾಸಾಗಿದ್ದು, ಕಳೆದೆರಡು ವರ್ಷಗಳಿಂದ ವಿದ್ಯಾರ್ಥಿಗಳು ಎನ್.ಐ.ಟಿ.ಕೆಗೆ ಆಯ್ಕೆಯಾಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಈಗಾಗಲೇ 4 ಸಂಯೋಜನೆಗಳಿದ್ದು (ಪಿ.ಸಿ.ಎಂ.ಬಿ 2 ತರಗತಿ, ಪಿ.ಸಿ.ಎಂ.ಸಿ ಹಾಗೂ ಪಿ.ಸಿ.ಎಂ.ಎಸ್) ಈ ಶೈಕ್ಷಣಿಕ ಸಾಲಿನಿಂದ ಎಲೆಕ್ಟ್ರಾನಿಕ್ಸ್ ವಿಷಯದೊಂದಿಗೆ ಹೊಸ ಸಂಯೋಜನೆ ಆರಂಭಗೊಳ್ಳಲಿದೆ. ವಾಣಿಜ್ಯ ವಿಭಾಗದಲ್ಲಿ 3 ಸಂಯೋಜನೆಗಳಿದ್ದು (ಬಿ.ಇ.ಬಿ.ಎ., ಸಿ.ಇ.ಬಿ.ಎ ಹಾಗೂ ಎಸ್.ಇ.ಬಿ.ಎ) ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಮುಕ್ತವಾದ ಅವಕಾಶವಿದೆ. ಪ್ರತಿ ವಿಷಯಗಳಿಗೂ ವಿಶೇಷ ಪರಿಣತಿ ಹೊಂದಿರುವ ಶಿಕ್ಷಕರಿದ್ದು ವಿದ್ಯಾರ್ಥಿಗಳ ಪ್ರಗತಿಯಲ್ಲಿ ಸದಾ ಸಹಕರಿಸುತ್ತಾರೆ. ಕುಂದಾಪ್ರ ಡಾಟ್ ಕಾಂ ವರದಿ.
[quote font_size=”14″ bgcolor=”#ffffff” bcolor=”#377fbf” arrow=”yes” align=”left”]ಜಿಲ್ಲೆಯ 6 ಬೆಸ್ಟ್ ಪಿಯು ಕಾಲೇಜಿನಲ್ಲೊಂದು
ಕುಂದಾಪುರದ ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ಉಡುಪಿ ಜಿಲ್ಲೆಯ ಆರು ಅತ್ಯುತ್ತಮ ಕಾಲೇಜುಗಳಲ್ಲೊಂದು. ಗುಣಮಟ್ಟದ ಶಿಕ್ಷಣ, ಸಂಸ್ಥೆಯ ವಿದ್ಯಾರ್ಥಿಗಳ ನಿರಂತರ ಸಾಧನೆ ಹಾಗೂ ಕಡಿಮೆ ಅವಧಿಯಲ್ಲಿ ಸಂಸ್ಥೆಯ ಪ್ರಗತಿ ಕಾಲೇಜಿಗೆ ಈ ಸ್ಥಾನವನ್ನು ತಂದುಕೊಟ್ಟಿದೆ.[/quote]
ಪೂರಕ ಪಠ್ಯ, ಪಠ್ಯೇತರ ವಾತಾವರಣ
ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ವಿಶಾಲವಾದ ಪ್ರಯೋಗಾಲಯ, ಗ್ರಂಥಾಲಯ ಮುಂತಾದ ಶಿಕ್ಷಣಕ್ಕೆ ಪೂರಕ ಸೌಲಭ್ಯಗಳನನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳು, ಹಲವಾರು ತಾಲೂಕು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ, ಸ್ಪರ್ಧೆಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಉತ್ಸುಕರಾಗಿ ಕಲಿಯುವಂತೆ ಮಾಡಿದೆ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಗಮನದಲ್ಲಿರಿಸಿಕೊಂಡು ಪೂರಕ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಿ, ಕುಂದಾಪುರ ಎಜುಕೇಶನ್ ಸೊಸೈಟಿ ಮೂಲಕ ಬಿ.ಎಂ. ಸುಕುಮಾರ ಶೆಟ್ಟಿಯವರು ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನೆಡೆಸುತ್ತಿದ್ದರೇ, ಸಂಸ್ಥೆಗೆ ಪ್ರಾಂಶುಪಾಲರಾಗಿ ಉತ್ತಮ ಆಡಳಿತದವನ್ನು ನೀಡುತ್ತಿರುವ ನವೀನ್ ಕುಮಾರ್ ಶೆಟ್ಟಿಯವರು ಮಾದರಿ ಸಂಸ್ಥೆಯನ್ನಾಗಿಸಲು ಪಣತೊಟ್ಟಿದ್ದಾರೆ.
ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಸಂಸ್ಥೆ
ಶಿಕ್ಷಣ ಕ್ರಾಂತಿಯ ರೂವಾರಿ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ
ಕುಂದಾಪುರ ಎಜುಕೇಶನ್ ಸೊಸೈಟಿಯ ಯಶಸ್ಸಿನ ಹಿಂದಿನ ರೂವಾರಿ ಅದರ ಅಧ್ಯಕ್ಷರು ಹಾಗೂ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರು. ಕುಂದಾಪುರ ಎಜುಕೇಶನ್ ಸೊಸೈಟಿಯ ವ್ಯಾಪ್ತಿಯಲ್ಲಿ ಬರುವ ನಾಲ್ಕು ಸಂಸ್ಥೆಗಳನ್ನು ನಾಡಿನ ಮಾದರಿ ಸಂಸ್ಥೆಯಾಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. ಸಮಾಜದ ಕಟ್ಟಕಡೆಯ ಮಗುವನ್ನೂ ವಿದ್ಯಾವಂತನನ್ನಾಗಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲಿರುಳೂ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶ್ರಮಿಸುತ್ತಿರು ಇವರ ಇಚ್ಛಾಶಕ್ತಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಶಿಕ್ಷಣದ ಬಗ್ಗೆ ಅಪಾರ ಕಾಳಜಿ, ಕಳಕಳಿ ಹೊಂದಿರುವ ಶ್ರೀಯುತರು ತಮ್ಮ ಯೋಚನೆ, ಯೋಜನೆಗಳನ್ನು ಕಾರ್ಯರೂಪಕ್ಕಿಳಿಸಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸಿದ ಈ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದೇ ಶ್ರೀಯುತರ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ಎಲ್ಲಾ ಸಂಸ್ಥೆಗಳನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾದರಿ ಸಂಸ್ಥೆಯನ್ನಾಗಿ ರೂಪಿಸಬೇಕೆಂಬ ಉತ್ಕಟ ಹಂಬಲವನ್ನು ಅವರು ಹೊಂದಿದ್ದಾರೆ. /ಕುಂದಾಪ್ರ ಡಾಟ್ ಕಾಂ ವರದಿ /
- ಆರ್‌ಎನ್‌ಎಸ್ ಪಿಯು ಕಾಲೇಜು ಸಂಪರ್ಕ : 08254 – 231501 (ಕಛೇರಿ) 9886807060 (ಪ್ರಾಂಶುಪಾಲರು)
► ಸತತವಾಗಿ ಸಾಧಕ ಶಾಲಾ ಪ್ರಶಸ್ತಿ ವಿಜೇತ ಕುಂದಾಪುರದ ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢ ಶಾಲೆ – http://kundapraa.com/?p=14141