Site icon Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ. ಗುರುತು ಪತ್ತೆಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿಗೆ ಸಮೀಪದ ಶಿರೂರಿನಲ್ಲಿರುವ ಪೋಲಿಸ್ ಚೆಕ್‌ಪೋಷ್ಟ್ ಪಕ್ಕದ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು ೬೦ ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು, ಕಂದು ಬಣ್ಣದ ಶರ್ಟ್ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕುತ್ತಿಗೆಯಲ್ಲಿ ತಾಯತ ಕಟ್ಟಿದ ಕಪ್ಪು ಬಣ್ಣದ ನೂಲು ಇದೆ. ಬಿಸಿಲಿನ ತಾಪಕ್ಕೆ, ಯಾವುದಾದರು ಕಾಯಿಲೆಯಿಂದ ಅಥವಾ ಹೃದಯಾಘಾತದಿಂದ ದಾರಿ ಮಧ್ಯದಲ್ಲಿ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಶಿರೂರು ಗ್ರಾಪಂ ಸದಸ್ಯ ರಘುರಾಮ ಪೂಜಾರಿ ಈ ಬಗ್ಗೆ ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಮೃತವ್ಯಕ್ತಿಯ ಗುರುತು ಇದ್ದವರು ಬೈಂದೂರು ಠಾಣೆಗೆ(೦೮೨೫೪-೨೫೧೦೩೩) ತಿಳಿಸುವಂತೆ ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ತಿಳಿಸಿದ್ದಾರೆ,

Exit mobile version