Site icon Kundapra.com ಕುಂದಾಪ್ರ ಡಾಟ್ ಕಾಂ

ನಿಟ್ಟೆ ಹಾಸ್ಟೆಲ್‌ನಲ್ಲಿ ಕುಂದಾಪುರದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಂದಾಪುರ ತಾಲೂಕಿನ ಜಪ್ತಿಯ ಅನುರಾಧ (೨೩) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.

ಕಾಲೇಜಿನ ಹಾಸ್ಟೆಲ್‌ನಲ್ಲಿ ಯಾರೂ ಇಲ್ಲದ ಸಂದರ್ಭ ತಾನಿದ್ದ ಕೊಠಡಿಗೆ ಬಾಗಿಲು ಹಾಗಿಕೊಂಡು ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಜಪ್ತಿಯ ಜನತಾ ಕಾಲೋನಿಯ ನಿವಾಸಿ ಎಂದು ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version