Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಲಿಗ್ರಾಮದಲ್ಲಿ ಕಾರು ಢಿಕ್ಕಿಯಾಗಿ ಮಹಿಳೆ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೋಟ: ಬೆಳಿಗ್ಗೆ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡು ಉಡುಪಿಯ ಖಾಸಗೀ ಆಸ್ಪತ್ರೆಗೆ ದಾಖಲಿಸಿಲಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಸಾಲಿಗ್ರಾಮ ಪಾರಂಪಳ್ಳಿಯ ಲಚ್ಚಿ ಪೂಜಾರ‍್ತಿ (64) ಎಂದು ಗುರುತಿಸಲಾಗಿದೆ. ಇವರು ವಿಶೇಷ ಕಾರ‍್ಯಕ್ರಮವೊಂದಕ್ಕೆ ಭಾಗವಹಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಾಗ ಉಡುಪಿಯಿಂದ ಕೋಟ ಕಡೆಗೆ ತೆರಳುತ್ತಿದ್ದ ಕಾರೊಂದು ಇವರಿಗೆ ಢಿಕ್ಕಿ ಹೊಡೆದ ಪರಿಣಾಮ ಇವರ ತಲೆ ರಸ್ತೆಯ ಡಿವೈಡರ್‌ಗೆ ಬಡಿದ ಕಾರಣ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಪರಿಶೀಲನೆಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಮಹಿಳೆ ಮೃತಪಟ್ಟಿದ್ದಾರೆ.

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಗಾಜು ಒಡೆದು ಹೋಗಿದೆ. ಮಹಿಳೆ  ನಾಲ್ವರು ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇದೇ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಣ್ಣಪುಟ್ಟ ರಸ್ತೆ ಅಪಘಾತ ಸಂಭವಿಸುತ್ತಿದ್ದು ಸ್ಥಳೀಯರು ಬ್ಯಾರಿಕೇಡ್ ಅಳವಡಿಸುವಂತೆ ಪೊಲೀಸ್ ಇಲಾಖೆಯನ್ನು ಕೋರಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version