Site icon Kundapra.com ಕುಂದಾಪ್ರ ಡಾಟ್ ಕಾಂ

ಹುಬ್ಬಳ್ಳಿ: ಬೆಂಕಿ ತಗುಲಿ ಬಸ್ರೂರು ಮೂಲದ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ/ಹುಬ್ಬಳ್ಳಿ: ಹುಬ್ಬಳ್ಳಿಯ ಹೋಟೆಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ತಾಲೂಕಿನ ಬಸ್ರೂರು ಮೂಲದ ವ್ಯಕ್ತಿಯೋರ್ವನಿಗೆ ರಾತ್ರಿ ತನ್ನ ರೂಮಿನಲ್ಲಿ ಮಲಗಿದ್ದಾಗ ಬೆಂಕಿ ತಗುಲಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೃತರನ್ನು ಬಸ್ರೂರು ಮೂಲದ ರಾಜು ಪೂಜಾರಿ ಎಂದು ಗುರುತಿಸಲಾಗಿದೆ.

ಎಂದಿನಂತೆ ಹೋಟೆಲ್ ಕೆಲಸ ಮುಗಿಸಿ ಹುಬ್ಬಳ್ಳಿಯ ವಿದ್ಯಾನಗರದ ತನ್ನ ರೂಮಿಗೆ ತೆರಳಿದ್ದ ರಾಜು ಪೂಜಾರಿ ರಾತ್ರಿ ಮಲಗಿದ್ದಾಗ ಬೆಂಕಿ ತಗುಲಿ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಆತ ತನ್ನ ರೂಮಿನಲ್ಲಿ ಒಬ್ಬಂಟಿಯಾಗಿದ್ದುದಲ್ಲದೇ, ರಾತ್ರಿ ವೇಳೆ ಘಟನೆ ನಡೆದ ಕಾರಣ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದು, ರೂಮಿನಲ್ಲಿ ದೀಪ ಹಚ್ಚಿ ಮಲಗಿದ್ದಾಗ ಇದು ಬೆಂಕಿ ಅವಘಡಕ್ಕೆ ದಾರಿಮಾಡಿಕೊಟ್ಟಿರಬಹುದು ಎಂದು ಶಂಕಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ

ಮೃತದೇಹವನ್ನು ಹುಬ್ಬಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ಮೃತರ ಪರಿಚಿತರು ಕೂಡಲೇ ವಿದ್ಯಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ (8197446267) ಕೊರಿಕೊಂಡಿದ್ದಾರೆ.

Exit mobile version