Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ : ಉಚಿತ ಮಾನಸಿಕ ತಪಾಸಣೆ ಮತ್ತು ಔಷಧಿ ವಿತರಣೆ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೋಟ: ಇಲ್ಲಿನ ಪರಿಸರದಲ್ಲಿ ನಡೆಸುತ್ತಿರುವ ಉಚಿತ ಮಾನಸಿಕ ಆರೋಗ್ಯ ಶಿಬಿರದ ಪ್ರಯೋಜನ ಪರಿಸರದ ಬಡ ರೋಗಿಗಳು ಪಡೆದುಕೊಳ್ಳುವಂತಾಗಲಿ ಎಂದು ಕೋಟ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಘವೇಂದ್ರ ಕಾಂಚನ್ ಹೇಳಿದರು.

ಮನಸ್ಮಿತ ಫೌಂಡೇಶನ್ ಕೋಟ, ಪರಿವರ್ತನ ಪುನರ್ವಸತಿ ಕೇಂದ್ರ ಕೋಟ, ಲಯನ್ಸ್ ಕ್ಲಬ್ ಬ್ರಹ್ಮಾವರ, ಬಾರ್ಕೂರು ಇವರ ವತಿಯಿಂದ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ತಪಾಸಣೆ ಮತ್ತು ಔಷಧಿ ವಿತರಣೆ ಶಿಬಿರವನ್ನು ಉದ್ಘಾಟಿಸಿ ಮಾನಾಡಿದರು.

ಇಂತಹ ಒಂದು ಉತ್ತಮ ಕಾರ್ಯವನ್ನು ಪ್ರತಿ ತಿಂಗಳು ಹಮ್ಮಿಕೊಂಡಿರುವ ಈ ಸಂಸ್ಥೆಗಳ ಪ್ರಯತ್ನ ನಿಜವಾಗಲೂ ಶ್ಲಾಘನೀಯ ಎಂದರು. ಮುಖ್ಯ ಅತಿಥಿಗಳಾಗಿ ಭರತ್ ಸೆಲೆಬ್ರೇಶನ್‌ನ ಚೇರ್‌ಮನ್, ಉದ್ಯಮಿ ಭರತ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರಂತರವಾಗಿ ಸಾಗಲಿ, ಜನರು ಯಾವುದೇ ಹಿಂಜರಿಕೆಯಿಲ್ಲದೆ ಮಾನಸಿಕ ಶಿಬಿರಕ್ಕೆ ಚಿಕಿತ್ಸೆ ಪಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಮನೋವೈದ್ಯರಾದ ಡಾ| ಪ್ರಕಾಶ್ ತೋಳಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಿವಿ, ಮೂಗು, ಗಂಟಲು ವೈದ್ಯರಾದ ಡಾ| ಸತೀಶ್ ಪೂಜಾರಿ ಸಭೆಯ ಅಧ್ಯಕ್ಷೆ ವಹಿಸಿದ್ದರು. ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟದ ಮುಖ್ಯಸ್ಥರಾದ ಎ.ಎಸ್. ಹೆಗ್ಡೆ ಉಪಸ್ಥಿತರಿದ್ದರು

Exit mobile version