Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ತ್ರೈಮಾಸಿಕ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಮನುಷ್ಯನು ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಉತ್ತಮ ಆಹಾರವನ್ನು ಸೇವಿಸಿ ಪರಿಸರದ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ನಾವು ನಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದರ ಜೊತೆಗೆ ಆರೋಗ್ಯ ವಿಮೆಯನ್ನು ಮಾಡಿಸಿಕೊಂಡು ಆರೋಗ್ಯ ಭದ್ರತೆ ಮಾಡಿಕೊಳ್ಳಬೇಕಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ನೀಡಿದೆ ಎಂದು ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಸಂಪೂರ್ಣ ಸುರಕ್ಷಾ ಯೋಜನೆ ಕುರಿತು ಮಾಹಿತಿ ನೀಡಿ ಹೇಳಿದರು.

ಅವರು ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯ ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಸಂಪೂರ್ಣ ಸುರಕ್ಷಾ ಯೋಜನೆ ಕುರಿತು ಮಾಹಿತಿ ನೀಡಿ ಮಾತನಾಡಿದರು.

ಪತ್ರಕರ್ತ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯ ಮೇಲ್ವಿಚಾರಕ ಚಂದ್ರ ಮರಾಠೆ, ಸೇವಾ ಪ್ರತಿನಿಧಿ ವನಜಾ, ಒಕ್ಕೂಟದ ಉಪಾಧ್ಯಕ್ಷೆ ಅಂಜಲಿ, ಕಾರ್ಯದರ್ಶಿ ಪ್ರತಿಮಾ, ಜತೆ ಕಾರ್ಯದರ್ಶಿ ಗೌರಿ ಮೇಸ್ತ, ಕೋಶಾಧಿಕಾರಿ ಭಾರತಿ ದೇವಾಡಿಗ ಉಪಸ್ಥಿತರಿದ್ದರು. ಪೂರ್ಣಿಮಾ ಸ್ವಾಗತಿಸಿದರು. ಅನಿತಾ ವಂದಿಸಿದರು.

Exit mobile version