Kundapra.com ಕುಂದಾಪ್ರ ಡಾಟ್ ಕಾಂ

ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್‌ನಿಂದ ವಿಶ್ವ ಪರಿಸರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಶ್ರೀ ಮಾರಿಕಾಂಬ ಯುತ್ ಕ್ಲಬ್ ಕಳವಾಡಿ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಇಲ್ಲಿನ ರತ್ತೂಬಾಯಿ ಜನತಾ ಹೈಸ್ಕೂಲಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿರಂತರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ರತ್ತೂಬಾಯಿ ಜನತಾ ಹೈಸ್ಕೂಲಿನ ಮುಖ್ಯೋಪಧ್ಯಾಯ ಜಿ.ಎಸ್. ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬೈಂದೂರು ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಗೋವಿಂದ ಪಟವಾಲ್, ಮಹಂತೇಶ್, ರತ್ತೂಬಾಯಿ ಜನತಾ ಹೈಸ್ಕೂಲಿನ ಶಿಕ್ಷಕರಾದ ಆನಂದ ಮದ್ದೋಡಿ, ಮಂಜು ಕಾಳವಾರ್ಕರ್, ಶ್ರೀ ಮಾರಿಕಾಂಬಾ ಯುತ್ ಕ್ಲಬ್ ಅಧ್ಯಕ್ಷ ಕೃಷ್ಣ ಚಂದನ್, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಮೊದಲಾದವರು ಉಪಸ್ಥಿತರಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/

Sri marikamba youth club kalavadi - wrold environment day (3)


Exit mobile version