Kundapra.com ಕುಂದಾಪ್ರ ಡಾಟ್ ಕಾಂ

ಪ್ರಕಾಶ್ ಆನಗಳ್ಳಿಗೆ ಬೆಸ್ಟ್ ಎಂಜಿನಿಯರಿಂಗ್ ರಾಷ್ಟ್ರ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಆನಗಳ್ಳಿಯ ಪ್ರಕಾಶ್ ಕೆ.ಆನಗಳ್ಳಿ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮಾರ್ಕೆಟಿಂಗ್ ಮತ್ತು ಕಾಂಟ್ರ್ಯಾಕ್ಟಿಂಗ್ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸಾಧನೆಗೆ ಅಂತಾರಾಷ್ಟ್ರೀಯ ಇನ್‌ಸ್ಟಿಟ್ಯೂಟ್ ಫಾರ್ ಸೋಷಿಯಲ್ ಆಂಡ್ ಎಕನಾಮಿಕ್ ರಿಫಾರ್ಮ್ಸ್ ಸಂಸ್ಥೆ ಕೊಡಮಾಡುವ ಎಂ.ವಿಶ್ವೇಶ್ವರಯ್ಯ ಬೆಸ್ಟ್ ಎಂಜಿನಿಯರಿಂಗ್ ನ್ಯಾಷನಲ್ ಆವಾರ್ಡ್ ಲಭಿಸಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಪಿ.ಸಾಂಗ್ಲಿಯಾನ ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಥೆಯ ಅಧ್ಯಕ್ಷರಾದ ಡಾ|ಎಚ್.ವಿ ಶಿವಪ್ಪ, ಕಾರ್ಯದರ್ಶಿ ಜಿ.ಎಸ್. ದೇಸಾಯಿ, ವಿಧಾನ ಪರಿಷತ್ ಸದಸ್ಯ ಚೌಡಾ ರೆಡ್ಡಿ, ಚಿತ್ರ ನಿರ್ದೇಶಕ ರಾಧಾಕೃಷ್ಣ, ಮೈಸೂರು ಕನ್‌ಸ್ಟ್ರಕ್ಷನ್ ಕಂಪನಿಯ ಮ್ಯಾನೇಜರ್ ಪುಟ್ಟ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

Exit mobile version