Kundapra.com ಕುಂದಾಪ್ರ ಡಾಟ್ ಕಾಂ

ಸತತ 4ನೇ ಭಾರಿಗೆ ರಾಜ್ಯಸಭೆಗೆ ಆಸ್ಕರ್ ಫೆರ್ನಾಂಡಿಸ್. ಕರಾವಳಿಯ ನಾಯಕರುಗಳಿಂದ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ೩ ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಸ್ಕರ್ ಫೆರ್ನಾಂಡಿಸ್, ಜೈರಾಮ್ ರಮೇಶ್ ಹಾಗೂ ಕೆಸಿ ರಾಮಮೂರ್ತಿ ಗೆಲುವು ಸಾಧಿಸಿದ್ದರೇ ಬಿಜೆಪಿಯ ನಿರ್ಮಲಾ ಸೀತಾರಾಮನ್ ಗೆಲುವು ಸಾಧಿಸಿದ್ದಾರೆ.

ಆಸ್ಕರ್ ಗೆಲುವು, ಕರಾವಳಿ ನಾಯಕರುಗಳಿಂದ ಅಭಿನಂದನೆ:
ಕಾಂಗ್ರೆಸ್ ಪಕ್ಷದ ಹಿರಿಯ ರಾಜಕೀಯ ಮುತ್ಸದ್ಧಿ ಆಸ್ಕರ್ ಫೆರ್ನಾಂಡಿಸ್ ಸತತ ನಾಲ್ಕನೇ ಭಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿರುವುದಕ್ಕೆ ಕರಾವಳಿಯ ಕಾಂಗ್ರೆಸ್ ಪಕ್ಷದ ನಾಯಕರು ಅಭಿನಂದಿಸಿದ್ದಾರೆ. ಸಚಿವ ವಿನಯಕುಮಾರ್ ಸೊರಕೆ, ರಮಾನಾಥ ರೈ, ಬೈಂದೂರು ಶಾಸಕ ಗೋಪಾಲ ಪೂಜಾರಿ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಜಿ.ಪಂ ಅಧ್ಯಕ್ಷ ರಾಜು ಪೂಜಾರಿ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಅಭಿನಂದಿಸಿದರು.

Oskar Fernandies 4th time elected to Rajyasabha. raju poojary wished (2)

Exit mobile version