Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಯಕ್ಷಗಾನ ಕಲಾವಿದನ ಕಾರು ರಿಕ್ಷಾಕ್ಕೆ ಡಿಕ್ಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಎ.ಕೆ. ರೆಸಿಡೆನ್ಸಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಆಲ್ಟೋ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರೇ, ಕಾರು ಚಲಾಯಿಸುತ್ತಿದ್ದ ಪೇರ್ಡೂರು ಮೇಳದ ಕಲಾವಿದ ಥಂಡೀಮನೆ ಶ್ರೀಪಾದ ಭಟ್ ಅಲ್ಪಸ್ವಲ್ಪ ಗಾಯಗೊಂಡಿದ್ದು, ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಇಡುಗುಂಜಿಯಿಂದ ಆನೆಗುಡ್ಡೆಗೆ ತೆರಳುತ್ತಿದ್ದ ಕಾರು ಬೈಂದೂರು ಕಡೆಗೆ ಬರುತ್ತಿದ್ದ ರಿಕ್ಷಾಗೆ ಎದುರಿನಿಂದಲೇ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಗಾಯಳುಗಳನ್ನು ಬೈಂದೂರು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version