Kundapra.com ಕುಂದಾಪ್ರ ಡಾಟ್ ಕಾಂ

ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಿನೇ ದಿನೇ ಏರುತ್ತಿರುವ ದಿನಬೆಳಕೆಯ ವಸ್ತುಗಳ ಬೆಲೆಯನ್ನು ನಿಯಂತ್ರಿಸುವಲ್ಲಿ ಕೇಂದ್ರದ ಎನ್‌ಡಿಎ ಸರಕಾರದ ಧೋರಣೆಯೇ ಕಾರಣವಾಗಿದ್ದು, ಶೀಘ್ರವೇ ಬೆಲೆಯರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಜನಸಾಮಾನ್ಯರ ಅಗತ್ಯ ವಸ್ತುಗಳಾದ ಬೆಳೆಕಾಳು, ತರಕಾರಿ, ದಿನಸಿ ಸಾಮಾಗ್ರಿಗಳು, ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು ಕೇಂದ್ರ ಸರಕಾರ ಅವುಗಳನ್ನು ಹತೋಟಿಗೆ ತರಲು ಸಂಪೂರ್ಣ ವಿಫಲವಾಗಿದೆ. ಕಳೆದ ಎರಡು ವರ್ಷದಲ್ಲಿ ಅಚ್ಚೇ ದಿನ್ ಹೇಳಿಕೊಂಡು ಬರುತ್ತಿರುವ ಸರಕಾರದ ಬಣ್ಣ ಬಯಲಾಗಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ನಾರಾಯಣ ಆಚಾರ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಬಿ. ಹಿರಿಯಣ್ಣಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಾಕೋಬ್ ಡಿಸೋಜಾ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕಾಸ್ ಹೆಗ್ಡೆ, ಪುರಸಭಾ ಸದಸ್ಯರುಗಳಾದ ರವಿಕಲಾ ಗಣೇಶ್, ದೇವಕಿ ಸಣ್ಣಯ್ಯ, ಶ್ರೀಧರ ಶೇರುಗಾರ್, ಪ್ರಭಾಕರ ಕೋಡಿ, ಕಾಂಗ್ರೆಸ್ ಮುಖಂಡರುಗಳಾದ ವಂಡಬಳ್ಳಿ ಜಯರಾಮ ಶೆಟ್ಟಿ, ಗಣೇಶ್ ಶೇರುಗಾರ್, ಮುರಳಿ ಶೆಟ್ಟಿ, ವಿಘ್ನೇಷ ಆಚಾರ್, ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Exit mobile version