Kundapra.com ಕುಂದಾಪ್ರ ಡಾಟ್ ಕಾಂ

ಸತತ ಮಳೆಯಿಂದಾಗಿ ಮನೆಗಳಿಗೆ ನುಗ್ಗಿದ ನೀರು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಳೆದ ನಾಲ್ಕುದಿನಗಳಿಂದ ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಕೆಲ ಭಾಗಗಳಲ್ಲಿ ನೆರೆ ಸೃಷ್ಠಿಸಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಸಮರ್ಪಕ ನಿರ್ವಹಣೆ, ಗ್ರಾಮ ಪಂಚಾಯತಿಗಳ ನಿರ್ಲಕ್ಷ್ಯ ದೋರಣೆಯಿಂದಾಗಿ ಹಲವೆಡೆ ಕೃತಕ ನೆರೆ ಸೃಷ್ಠಿಯಾಗಿದೆ.

ಯಡ್ತರೆ ಗ್ರಾಪಂ ವ್ಯಾಪ್ತಿಯ ಬೈಂದೂರು ಬೈಪಾಸಿನ ಹತ್ತಿರವಿರುವ ಸಮಾರು ಆರು ಮನೆಗಳಿಗೆ ನೀರು ನುಗ್ಗಿ ಸಂಪೂರ್ಣ ದ್ವೀಪವಾಗಿದೆ. ಮೂರು ಮನೆಯವರು ಮನೆಯನ್ನು ಕೂಡಾ ಬಿಟ್ಟು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.

ಬೈಂದೂರು ರಾ.ಹೆ. ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ನೀರು ಹೋಗುವ ತೋಡುಗಳು ರೋಡಾಗಿ ಮಾರ್ಪಟ್ಟಿದೆ. ಮಳೆಯ ನೀರು ಮೊದಲಿನ ಹಾಗೆ ಚರಂಡಿಯಲ್ಲಿ ಹರಿದು ಹೋಗುತ್ತಿಲ್ಲ. ಹೆದ್ದಾರಿ ಬದಿಯಲ್ಲಿ ಮಣ್ಣು ಹಾಕಿರುವ ಕಾರಣ ಇದರಿಂದ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದೆ. ಚರಂಡಿಯಲ್ಲಿ ತುಂಬಿದ ಹೂಳು ಕೂಡಾ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

News Water flowed to house1

Exit mobile version