Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನಲ್ಲಿ 2015-16 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ದೇವಳದ ಕಾರ್ಯನಿರ್ವಾಹಣಾಧಿಕಾರಿ ಟಿ. ಆರ್. ಉಮ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಸಾಧನೆಯನ್ನು ಮತ್ತು ಉಪನ್ಯಾಸಕರ ಶ್ರಮವನ್ನು ಶ್ಲಾಘಿಸಿದರು. ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಇನ್ನು ಹೆಚ್ಚಿನ ಶ್ರಮ ವಹಿಸಿ ಯಶಸ್ಸನ್ನು ಸಾಧಿಸಬೇಕೆಂದು ಮಕ್ಕಳಲ್ಲಿ ಸ್ಪೂರ್ತಿ ತುಂಬಿದರು. ಮುಖ್ಯ ಅತಿಥಿಗಳಾಗಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ಎಂ ಗೋವಿಂದ ನಾಯ್ಕನಕಟ್ಟೆ ಹಾಗೂ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲ ಎಸ್.ಅರುಣ್ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಉಪನ್ಯಾಸಕರು, ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಸುಪ್ರೀಯ ಕೆ.ಎಲ್ ಸ್ವಾಗತಿಸಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಾಧಿಕಾ ನಿರೂಪಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಚನಾ ವಂದಿಸಿದರು.

Exit mobile version