ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬಿಜೂರು ಕಳುಹಿನಬಾಗಿಲು ನಿವಾಸಿ, ನಿವೃತ್ತ ಉಪನ್ಯಾಸಕ ಶಿಕ್ಷಣ ತಜ್ಞ ಬಿ. ಹೊನ್ನ ದೇವಾಡಿಗ (೮೫) ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಬುಧವಾರ ನಿಧನರಾದರು.
ಮದ್ರಾಸಿನ ವೈ.ಎಮ್.ಸಿ.ಎ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ತರಬೇತಿಯನ್ನು ಪಡೆದಿದ್ದ ಅವರು, ಬೈಂದೂರು ಬೋರ್ಡ್ ಹೈಸ್ಕೂಲಿನಲ್ಲಿ ದೈಹಿಕ ಶಿಕ್ಷಕರಾಗಿ, ಬಳಿಕ ಖಾಸಗಿಯಾಗಿ ಸ್ನಾತಕೋತರ ಪದವಿ ಪಡೆದು, ತೆಕ್ಕಟ್ಟೆ, ಶಿರೂರು ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಬೈಂದೂರು ಪದವಿಪೂರ್ವ ಕಾಲೇಜಿನಲ್ಲಿ ಸುಧೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದಾರೆ. ಅಲ್ಲದೇ ಅದೇ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕಾಲೇಜಿನಲ್ಲಿ ಸ್ಕೌಟ್ ಗೈಡ್ ಕಮಾಂಡರ್ ಆಗಿ ವಿದ್ಯಾರ್ಥಿಗಳ ಮೆಚ್ಚಿನ ಹೊನ್ನ ಮಾಸ್ಟ್ ಆಗಿದ್ದರು. ಬೈಂದೂರಿನ ದೇವಾಡಿಗ ಸಂಘದ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ದುಡಿದಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಗಣ್ಯರಿಂದ ಅಂತಿಮ ನಮನ: ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ತಾ.ಪಂ. ಸದಸ್ಯ ಜಗದೀಶ ದೇವಾಡಿಗ, ಉಪ್ಪುಂದ ದೇವಾಡಿಗ ಸಂಘದ ಅಧ್ಯಕ್ಷರು ಹಾಗೂ ಬೈಂದೂರು ದೇವಾಡಿಗ ಒಕ್ಕೂಟದ ಅಧ್ಯಕ್ಷರು ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.