Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಇದರ 2016-17ನೇ ಸಾಲಿನ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ವಂಡ್ಸೆ ಗ್ರಾಮ ಪಂಚಾಯತ್‌ಗೆ ೩ ಅವಧಿಯಿಂದ ಆಯ್ಕೆಯಾಗುತ್ತ ಬಂದ ಇವರು ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

ರೋಟರಿ ಕ್ಲಬ್ ಕುಂದಾಪುರ ಇದರ ಕಾರ್ಯದರ್ಶಿಯಾಗಿ ಸಾಲಗದ್ದೆ ಶಶಿಧರ್ ಶೆಟ್ಟಿ, ಉಪಾಧ್ಯಕ್ಷರಾಗಿ ನಿವೃತ್ತ ಕ್ಷೇತ್ರ ಶಿಕ್ಷಣಾದಿಕಾರಿ ಗೋಪಾಲ ಶೆಟ್ಟಿ, ಭಾಷಾ ಸಾಹೇಬ್, ಕೋಶಾಧಿಕಾರಿಯಾಗಿ ಪ್ರದೀಪ್ ವಾಜ್, ಜೊತೆ ಕಾರ್ಯದರ್ಶಿಯಾಗಿ ಮನೋಜ್ ನಾಯರ್, ರಾಜೀವ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Exit mobile version