Kundapra.com ಕುಂದಾಪ್ರ ಡಾಟ್ ಕಾಂ

ಯಕ್ಷಗಾನದಲ್ಲಿ ಕರಾವಳಿಯ ಸೊಗಡು ಅಡಗಿದೆ: ಬಾಬು ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಕ್ಷಗಾನದಲ್ಲಿ ಕರಾವಳಿಯ ಸೊಗಡು ಅಡಗಿದೆ. ನಮ್ಮ ಸಂಸ್ಕೃತಿಯ ಬೇರುಗಳು ಗಟ್ಟಿಯಾಗಿ ಉಳಿಯಬೇಕಿದ್ದರೇ, ಇಂತಹ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ. ಎಂದು ಜಿ.ಪಂ ಸದಸ್ಯ ಕೆ. ಬಾಬು ಶೆಟ್ಟಿ ಹೇಳಿದರು.

ಇಲ್ಲಿನ ರೋಟರಿ ಭವನದಲ್ಲಿ ಇತ್ತಿಚಿಗೆ ಯಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ನೆರವಿನೊಂದಿಗೆ ಜರುಗಿದ ನಾಲ್ಕು ದಿನಗಳ ಜನ-ಸಂಸ್ಕೃತಿ ಸಂಭ್ರಮ ೨೦೧೬ರ ವರ್ಣಚಿತ್ರವೈಭವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಳೆದ ಒಂದೂವರೆ ದಶಕಗಳಿಂದ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬೈಂದೂರು ಭಾಗದಲ್ಲಿ ಒಂದು ಕಲಾ ಪ್ರೇಕ್ಷಕರನ್ನು ಹುಟ್ಟುಹಾಕಿರುವ ಯುಸ್ಕೊರ್ಡ್ ಟ್ರಸ್ಟ್ ಕಾರ್ಯ ಶ್ಲಾಘನೀಯವಾಗಿದ್ದು, ಸರಕಾರದ ಮಟ್ಟದಲ್ಲಿ ಅಗತ್ಯ ನೆರವು ಒದಗಿಸಿ ಪ್ರೋತ್ಸಾಹಿಸಲಾಗುವುದು ಎಂದು ಭರವಸೆಯಿತ್ತರು. ಯಡ್ತರೆ ಗ್ರಾ.ಪಂ ಅಧ್ಯಕ್ಷ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಶಾಖಾಧಿಕಾರಿ ಶ್ರೀಧರ ಭಟ್ ಉಪಸ್ಥಿತರಿದ್ದರು.

ಯಡ್ಕೋರ್ಡ್ ಟ್ರಸ್ಟ್ ರಿ. ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿದರು. ಅಧ್ಯಕ್ಷ ಸುಧಾಕರ ಪಿ. ಬೈಂದೂರು ನಿರೂಪಿಸಿ, ಧನ್ಯವಾದಗೈದರು. ಬಳಿಕ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮೇಳ ಕೆರೆಮನೆ ಇವರಿಂದ ಸುಭದ್ರ ಕಲ್ಯಾಣ ಯಕ್ಷಗಾನ ಜರುಗಿತು.

Exit mobile version