Kundapra.com ಕುಂದಾಪ್ರ ಡಾಟ್ ಕಾಂ

ಅಂಕೋಲಾದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಕುಂದಾಪುರದ ಯುವಕ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಂಕೋಲಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಡಸ್ಟರ್ ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ ಟಿ.ಟಿ ರಸ್ತೆಯ ನಿವಾಸಿ ಗುರುರಾಜ ಪೂಜಾರಿ (29) ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಕುಂದಾಪುರದ ಕಂಪ್ಯೂಟರ್ ಸೆಂಟರೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಗುರುರಾಜ್, ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ಕೆಲಸದ ನಿಮಿತ್ತ ಸ್ನೇಹಿತನೊಂದಿಗೆ ತೆರಳಿ ಕುಂದಾಪುರಕ್ಕೆ ಮರುಳುತ್ತಿರುವಾಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಸ್ಟರ್ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿತ್ತು. ಅಫಘಾತದ ತೀವ್ರತೆಗೆ ಟ್ಯಾಂಕ್ ಮಗುಚಿ ಬಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. ಕಾರು ಚಲಾಯಿಸುತ್ತಿದ್ದ ಗುರುರಾಜ್ ಗೆ ಗಂಭೀರ ಗಾಯಗಳಾಗಿ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಮಣಿಪಾಲಕ್ಕೆ ಕೊಂಡೊಯ್ದು ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದರು. ಕಾರಿನಲ್ಲಿದ್ದ ಸ್ನೇಹಿತ ಅಪಘಾತದಿಂದ ಪಾರಾಗಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಕುಂದಾಪುರ ಟಿ.ಟಿ ರಸ್ತೆಯ ಆನಂದ ಪೂಜಾರಿ ಎಂಬುವರು ಪುತ್ರನಾಗಿರುವ ಗುರುರಾಜ್ ತಂದೆ ಹಾಗೂ ನಾಲ್ವರು ಸಹೋದರರನ್ನು ಅಗಲಿದ್ದಾರೆ.

Exit mobile version