Kundapra.com ಕುಂದಾಪ್ರ ಡಾಟ್ ಕಾಂ

ಕೋಡಿ ಬ್ಯಾರೀಸ್ ಸ್ಕೂಲ್‌ನಲ್ಲಿ ಇಕೋ ಕ್ಲಬ್ ಉದ್ಘಾಟನೆ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಡಿ ಬ್ಯಾರಿಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್‌ನಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಯತ ಹಾಜಿ ಮಾಸ್ಟರ್ ಮೆಹಮೂದ್‌ರವರ ಅಧ್ಯಕ್ಷತೆಯಲ್ಲಿ, ಮುಖ್ಯ ಅಥಿತಿಯಾಗಿ ಆಗಮಿಸಿದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಯತ ಉದಯ ಗಾಂವಕರ್‌ರವರು ಇಕೋ ಕ್ಲಬ್ ಉದ್ಘಾಟಿಸಿ ಪರಿಸರ ಸಂರಕ್ಷಣೆಯಲ್ಲಿ ಇಕೋ ಕ್ಷಬ್‌ನ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಶಾಲೆಯ ಮುಖ್ಯೋಪಾದ್ಯಾಯಿನಿ ಶ್ರೀಮತಿ ರೇಷ್ಮ ಡಿ ಸೋಜಾ, ಇಕೋ ಕ್ಲಬ್‌ನ ಅಧ್ಯಕ್ಷೆ ವಿದ್ಯಾರ್ಥಿನಿ ಮುಫಿದಾ ಉಪಸ್ಥಿತರಿದ್ದರು. ಕುಮಾರಿ ರಕ್ಷಿತಾ ಸ್ವಾಗತಿಸಿ, ಕುಮಾರಿ ರಿಧಾ ವಂದಿಸಿದರು. ಕುಮಾರಿ ರಿಕಿತಾ ಕಾರ್ಯಕ್ರಮ ನಿರ್ವಹಿಸಿದರು.

Exit mobile version