Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವನಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ(ರಿ.), ಕುಂದಾಪುರ ಅಭಿಯೋಗ ಇಲಾಖೆ ಮತ್ತು ಅರಣ್ಯ ಇಲಾಖೆ ಕುಂದಾಪುರ ಮತ್ತು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು.

ಕುಂದಾಪುರ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮತ್ತು ತಾ. ಕಾ. ಸೇ. ಸಮಿತಿ ಕಾರ್ಯದರ್ಶಿ ಪ್ರೀತ್ ಜೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರವೀಶ್ಚಂದ್ರ ಶೆಟ್ಟಿ, ಸಹಾಯಕ ಸರಕಾರಿ ಅಭಿಯೋಜಕಿ ಸುಮಂಗಲಾ ನಾಯ್ಕ್, ವಲಯ ಅರಣ್ಯಾಧಿಕಾರಿಗಳು ಶರತ್‌ಕುಮಾರ್ ಶೆಟ್ಟಿ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ರಕ್ಷಿತ್ ರಾವ್ ಗುಜ್ಜಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

news B.B Hegde college Vanamahotsava1

Exit mobile version