ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜು ಯುತ್ ರೆಡ್ ಕ್ರಾಸ್ ಘಟಕ ಕಾರ್ಯಚಟುವಟಿಕೆ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಜರುಗಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಸಭಾಪತಿ ಜಯಕರ ಶೆಟ್ಟಿ ಉದ್ಘಾಟಿಸಿದರು, ಭಂಡಾರ್ಕಾರ್ಸ್ ಕಾಲೇಜ್ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಚಿನ್ಮಯಿ ಆಸ್ಪತ್ರೆ ನಿರ್ದೇಶಕ ಡಾ.ಉಮೇಶ್ ಪುತ್ರನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕಾ ಘಟಕ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಭಂಡಾರ್ಕಾರ್ಸ್ ಕಾಲೇಜ್ ಯುತ್ ರೆಡ್ ಕ್ರಾಸ್ ಘಟಕ ಕಾರ್ಯಾಕ್ರಮಾಧಿಕಾರಿ ಪ್ರೊ. ಸತ್ಯನಾರಾಯಣ ಮತ್ತು ವಿದ್ಯಾರಾಣಿ ಉಪಸ್ಥಿತರಿದ್ದರು.