ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾವು ದಿನನಿತ್ಯ ಸೇವಿಸುವ ಆಹಾರ ಕಲಬೆರಕೆಯಿಂದ ಕೂಡಿದೆ. ಹಣ್ಣು-ತರಕಾರಿಗಳಿಗೆ ರಾಸಾಯನಿಕಗಳ ಸಿಂಪಡಿಸಲಾಗುತ್ತಿದೆ. ಇವೇ ಮುಂತಾದ ಕಾರಣದಿಂದಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಇವುಗಳ ಬಗೆಗೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ನಿವೃತ್ತ ಶಿಕ್ಷಕಿ ಸುಧಾಮೂರ್ತಿ ಹೇಳಿದರು.
ಕುಸುಮ ಫೌಂಡೇಶನ್ ದತ್ತು ಸ್ವೀಕರಿಸಿರುವ ನಾಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ಗುಣಮಟ್ಟದ ಆಹಾರವನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದ ಅವರು ಮಕ್ಕಳಿಗೆ ವನಮಹೋತ್ಸವದ ಪ್ರಾಮುಖ್ಯತೆ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಕುಸುಮ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ನಳಿನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಗಿಡಗಳನ್ನು ವಿತರಿಸಲಾಯಿತು. ಶಾಲೆಯ ಅಧ್ಯಾಪಕ ವೃಂದ, ಎಸ್‌ಡಿಎಮ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕುಸುಮ ಫೌಂಡೆಶನ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಗುರುರಾಜ್ ಸ್ವಾಗತಿಸಿ, ವಂದಿಸಿದರು.