ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಟ್ಕಳದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಹುಬ್ಬಳ್ಳಿ ಮುಂಬೈನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸುಗಳ ನಡುವಿನ ಅಫಘಾತದಲ್ಲಿ ಸರಕಾರಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಯೋಬ್ಬ ಗಂಭೀರವಾಗಿ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವರದಿಯಾಗಿದೆ. ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿ ರಾಘವೇಂದ್ರ ಶೆಟ್ಟಿ (20) ಮೃತ ದುರ್ದೈವಿ.
ಘಟನೆಯ ವಿವರ:
ಭಟ್ಕಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಉಪ್ಪುಂದದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಮುಂದೆ ಬರುತ್ತಿದ್ದ ವೇಳೆ, ಉಪ್ಪಂದ ಹೋಟೆಲೊಂದರ ಎದುರು ನಿಲ್ಲಿಸಿದ್ದ ವಿಆರ್‌ಎಲ್ ಸಂಸ್ಥೆಯ ವಿಜಯಾನಂದ ಖಾಸಗಿ ವೋಲ್ಪೋ ಬಸ್ಸು ಕುಂದಾಪುರ ಕಡೆಗೆ ಸಾಗಲು ಒಮ್ಮೆಲೇ ರಾಷ್ಟ್ರೀಯ ಹೆದ್ದಾರಿ ಪ್ರವೇಶಿಸಿದ್ದರ ಪರಿಣಾಮ ಹಿಂಬದಿಯ ಬಾಗಿಲು ಹಾಗೂ ಬಾಗಿಲಿನ ಮೆಟ್ಟಿನಿಂದ ಮೇಲೆ ಹತ್ತುತ್ತಿದ್ದ ವಿದ್ಯಾರ್ಥಿಗೆ ಖಾಸಗಿ ಬಸ್ಸಿನ ಮುಂಭಾಗ ಬಡಿದಿತ್ತು. ಅಫಘಾತದ ತೀವ್ರತೆಗೆ ವಿದ್ಯಾರ್ಥಿ ಕೆಳಗೆ ಬಿದ್ದು ತಲೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಆತನನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಪ್ಪುಂದದ ಜನತಾ ಕಾಲೋನಿ ನಿವಾಸಿ ಸದಾಶಿವ ಶೆಟ್ಟಿ ಎಂಬುವವರ ಇಬ್ಬರು ಮಕ್ಕಳಲ್ಲಿ ಹಿರಿಯವನಾದ ರಾಘವೇಂದ್ರ ಶೆಟ್ಟಿ ಕಲಿಕೆಯಲ್ಲಿ ಉತ್ತಮವಾಗಿದ್ದ. ಸೌಮ್ಯ ಸ್ವಭಾವದ ವಿದ್ಯಾರ್ಥಿಯಾಗಿದ್ದ ಆತ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಎನ್ನಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಆಗಮಿಸಿ ತನಿಕೆ ನಡೆಸುತ್ತಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಮಾಜಿ ಅಧ್ಯಕ್ಷ ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ ಮೊದಲಾದವರು ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಕಟ್ಟೆಯೊಡೆದ ಆಕ್ರೋಶ:
ವಿದ್ಯಾರ್ಥಿ ರಾಘವೇಂದ್ರ ಶೆಟ್ಟಿ ಮೃತಪಟ್ಟ ಸುದ್ದಿ ತಿಳಿಯುತ್ತಲೇ ಎಲ್ಲಾ ಕಾಲೇಜಿನ ಸರಕಾರಿ ಬಸ್ಸಿನ ಅಲಭ್ಯತೆಯ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಯಕ್ಕ ಸರಿಯಾಗಿ ಬಸ್ಸು ಬಾರದೇ ಜನಜಂಗುಳಿಯಾಗುತ್ತಿದೆ. ವಿದ್ಯಾರ್ಥಿಗಳನ್ನು ಎಲ್ಲಾ ಪ್ರಯಾಣಿಕರು ಹತ್ತಿದ ಬಳಿಕ ಕೊನೆಯಲ್ಲಿ ಹತ್ತಿಸಿಕೊಂಡು ಪಾಸ್ ಹೊಂದಿರುವವರು ಎಂಬ ಕಾರಣಕ್ಕಾಗಿ ತಾರತಮ್ಯ ಧೋರಣೆ ತಳೆದಿದ್ದಾರೆ ಎಂದು ತಮ್ಮ ಆಕ್ರೋಶ ಹೊರಗಡವಿದ್ದಾರೆ. ಇನ್ನೊಂಡೆಗೆ ವ್ಯವಸ್ಥೆಯನ್ನು ಖಂಡಿಸಿ ಸ್ಥಳದಲ್ಲಿಯೇ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಸದ್ಯ ವಿದ್ಯಾರ್ಥಿಗಳು ಹೆದ್ದಾರಿ ತಡೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/